ದಕ್ಷಿಣ ಕನ್ನಡ: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ  ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದರು.

ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಅಜಿಂಕ್ಯ ರಹಾನೆ ಆಗಮಿಸಿದ್ದರು.