Ad

ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯಕ್ಕೆ ಡೇಟ್‌ ಫಿಕ್ಸ್‌

ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿಗೆ ಸಲ್ಲಿಸಿದೆ. ಈ ವೇಳಾಪಟ್ಟಿಯಂತೆ ಫೆಬ್ರವರಿ 19 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿಗೆ ಸಲ್ಲಿಸಿದೆ. ಈ ವೇಳಾಪಟ್ಟಿಯಂತೆ ಫೆಬ್ರವರಿ 19 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ.ಇನ್ನು ಮಾರ್ಚ್ 1 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಅಲ್ಲದೆ ಈ ಪಂದ್ಯಕ್ಕೆ ಲಾಹೋರ್​ನ ಗಡ್ಡಾಫಿ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ತಿಳಿಸಲಾಗಿದೆ.

Ad
300x250 2

ಪಾಕಿಸ್ತಾನದ 3 ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಲಾಹೋರ್‌ನಲ್ಲಿ 7, ರಾವಲ್ಪಿಂಡಿಯಲ್ಲಿ 5 ಮತ್ತು ಕರಾಚಿಯಲ್ಲಿ 3 ಪಂದ್ಯಗಳನ್ನು ಆಡಲಾಗುವುದು. ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಹಾಗೂ ಒಂದು ಸೆಮಿಫೈನಲ್‌, ರಾವಲ್ಪಿಂಡಿಯಲ್ಲಿ ಇನ್ನೊಂದು ಸೆಮಿಫೈನಲ್‌, ಲಾಹೋರ್‌ನಲ್ಲಿ ಫೈನಲ್‌ ನಡೆಯಲಿದೆ. ಒಂದು ವೇಳೆ ಭಾರತ ಸೆಮಿಫೈನಲ್‌ ಪ್ರವೇಶಿಸಿದರೆ ಆ ಪಂದ್ಯವನ್ನು ಲಾಹೋರ್‌ನಲ್ಲಿ ಆಡಲಾಗುವುದು. ಸದ್ಯ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಪಂದ್ಯಾವಳಿ ನಡೆಯುವ ಸ್ಟೇಡಿಯಂನ ಸಿದ್ಧತೆಯಲ್ಲಿ ತೊಡಗಿದೆ.

Ad
Ad
Nk Channel Final 21 09 2023
Ad