Ad

ನಿವೃತ್ತಿ ಘೋಷಣೆ ಸುದ್ದಿಗೆ ಸ್ಪಷ್ಟನೆ ನೀಡಿದ ಡೇವಿಡ್‌ ಮಿಲ್ಲರ್‌

ಸೌತ್‌ ಆಫ್ರಿಕಾದ ವಿರುದ್ಧ ಭಾರತ ತಂಡ ಭರ್ಜರಿ ಜಯದೊಂದಿಗೆ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ಬೆನ್ನಲ್ಲೆ ರನ್ನರಪ್‌ ಸ್ಥಾನದಲ್ಲಿರುವ ಸೌತ್‌ ಆಫ್ರಿಕಾದ ಆಟಗಾರ ಡೇವಿಡ್‌ ಮಿಲ್ಲರ್‌ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು ಇಸೀಗ ಈ ಸುದ್ದಿಗೆ ಡೇವಿಡ್‌ ಸ್ಪಷ್ಟನೆ ನೀಡಿದ್ದು, ನಾನು ಟಿ20 ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿಲ್ಲ ಎಂದು ತಿಳಿಸಿದ್ದಾರೆ.

300x250 2

ಈ ಬಾರಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ 21 ರನ್ ಬಾರಿಸಿದ್ದರು. ಅದರಲ್ಲೂ ಪಂದ್ಯವನ್ನು ಕೊನೆಯ ಓವರ್​ ತನಕ ಕೊಂಡೊಯ್ದಿದ್ದ ಮಿಲ್ಲರ್ 20ನೇ ಓವರ್​ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾಗಿದ್ದರು.

ಇದರ ಬೆನ್ನಲ್ಲೇ ಫೈನಲ್ ಸೋಲಿನ ನೋವಿನಲ್ಲಿ ಡೇವಿಡ್ ಮಿಲ್ಲರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಿಲ್ಲರ್, ಎಲ್ಲವೂ ಸುಳ್ಳು ಸುದ್ದಿ ಅಷ್ಟೇ. ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿಲ್ಲ. ಸೌತ್ ಆಫ್ರಿಕಾ ಪರ ಮತ್ತೆ ಕಣಕ್ಕಿಳಿಯಲಿದ್ದೇವೆ. ಅತ್ಯುತ್ತಮವಾದದ್ದು ಇನ್ನೂ ಬರಬೇಕಿದೆ ಎಂದು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad