Ad

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಡೇವಿಡ್ ವಾರ್ನರ್ ವಿದಾಯ

Devd

ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.

Ad
300x250 2

ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡದ ಲೆಕ್ಕಾಚಾರಗಳು ತಲೆಕೆಳಗಾಗಿದೆ. ಹೀಗಾಗಿ ಡೇವಿಡ್ ವಾರ್ನರ್ ನೋವಿನ ವಿದಾಯ ಹೇಳುವಂತಾಗಿದೆ.

ಇದಕ್ಕೂ ಮುನ್ನ ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಟಿ20 ವಿಶ್ವಕಪ್​ ಮೂಲಕ ಚುಟುಕು ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದಾರೆ.

 

Ad
Ad
Nk Channel Final 21 09 2023
Ad