News Karnataka Kannada
Saturday, May 11 2024
ಕ್ರೀಡೆ

ಹೊಸ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್

David Warner
Photo Credit : News Kannada

ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ಕಡೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಆರಂಭಿಕರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್​ ನೀಡಿದ 384 ರನ್​ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಶತಕದ ಜೊತೆಯಾಟವಾಡಿದರು.

38 ಓವರ್​ಗಳ ಮುಕ್ತಾಯದ ವೇಳೆಗೆ ಮೊದಲ ವಿಕೆಟ್​ಗೆ 135 ರನ್​ಗಳನ್ನು ಕಲೆಹಾಕಿದ ವಾರ್ನರ್-ಖ್ವಾಜಾ ಜೋಡಿ ಆಸ್ಟ್ರೇಲಿಯಾ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದಾರೆ. ಈ ಶತಕದ ಜೊತೆಯಾಟದೊಂದಿಗೆ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.

ಉಸ್ಮಾನ್ ಖ್ವಾಜಾ ಜೊತೆಗೂಡಿ 100 ರನ್​ ಕಲೆಹಾಕುವುದರೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಆಟಗಾರ ಎಂಬ ವಿಶ್ವ ದಾಖಲೆ ಡೇವಿಡ್ ವಾರ್ನರ್ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ಜಾಕ್ ಹೊಬ್ಸ್ (ಇಂಗ್ಲೆಂಡ್), ಗ್ರೇಮ್ ಸ್ಮಿತ್ (ಸೌತ್ ಆಫ್ರಿಕಾ), ಅಲಿಸ್ಟರ್ ಕುಕ್ (ಇಂಗ್ಲೆಂಡ್) ಹೆಸರಿನಲ್ಲಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು