Ad

ಟಿ20 ವಿಶ್ವಕಪ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಸ್ಟಾರ್ ಆಟಗಾರ ವಿದಾಯ

David Wiese

ನಮೀಬಿಯಾ ತಂಡದ ಸ್ಟಾರ್ ಆಲ್​ರೌಂಡರ್ ಡೇವಿಡ್ ವೀಝ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆಂಟಿಗುವಾದ ನಾರ್ತ್ ಸೌಂಡ್‌ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಬಾರಿ ಕಣಕ್ಕಿಳಿಯುವ ಮೂಲಕ ವೀಝ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದರು.

Ad
300x250 2

2013 ರಿಂದ 2016 ರವರೆಗೆ ಸೌತ್ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದ ವೀಝ ಆ ಬಳಿಕ ನಮೀಬಿಯಾ ಪರ ಹೊಸ ಕೆರಿಯರ್ ಆರಂಭಿಸಿದ್ದರು. ಇದೀಗ ತಮ್ಮ 11 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ, ಕೆಕೆಆರ್ ಪರ ಒಟ್ಟು 18 ಪಂದ್ಯಗಳನ್ನಾಡಿರುವ ಡೇವಿಡ್ ವೀಝ 148 ರನ್​ ಹಾಗೂ 16 ವಿಕೆಟ್ ಕಬಳಿಸಿದ್ದಾರೆ. ವಿಶೇಷ ಎಂದರೆ ಎರಡು ದೇಶಗಳನ್ನು ಪ್ರತಿನಿಧಿಸಿ ಐಪಿಎಲ್​ನಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ಎಂಬ ದಾಖಲೆ ಡೇವಿಡ್ ವೀಝ ಹೆಸರಿನಲ್ಲಿದೆ.

Ad
Ad
Nk Channel Final 21 09 2023
Ad