Categories: ಕ್ರೀಡೆ

ವಿರಾಟ್‌ ಕೊಹ್ಲಿಗೂ ತಟ್ಟಿದ ಡೀಪ್‌ ಫೇಕ್‌ ಬಿಸಿ!

ನವದೆಹಲಿ: ಹಲವು ತಾರಾ ನಟ-ನಟಿಯರು, ದಿಗ್ಗಜ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಫೇಕ್‌ ಬಳಿಕ ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿಗೂ ಡೀಪ್‌ ಫೇಕ್‌ ಬಿಸಿ ತಟ್ಟಿದೆ. ಕೊಹ್ಲಿ ಅವರು ಬೆಟ್ಟಿಂಗ್‌ ಆ್ಯಪ್‌ ಬಗ್ಗೆ ಪ್ರಚಾರ ಮಾಡುತ್ತಿರುವಂತೆ ಕಾಣುವ ಎಡಿಟೆಡ್‌ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ಕೊಹ್ಲಿ ಸಂದರ್ಶನವೊಂದರಲ್ಲಿ ಮಾತನಾಡುತ್ತಿರುವ ದೃಶ್ಯವನ್ನು ಕಿಡಿಗೇಡಿಗಳು ಎಡಿಟ್‌ ಮಾಡಿದ್ದಾರೆ. ಎಐ ತಂತ್ರಜ್ಞಾನದ ಮೂಲಕ ಕೊಹ್ಲಿಯ ಶಬ್ಧವನ್ನು ಬಳಕೆ ಮಾಡಿ ಆ್ಯಪ್‌ನ ಪ್ರಚಾರ ಮಾಡುತ್ತಿರುವಂತೆ ವಿಡಿಯೋ ಹರಿಬಿಟ್ಟಿದ್ದಾರೆ. ಕಡಿಮೆ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸುವ ತಂತ್ರಗಳನ್ನು ವಿರಾಟ್‌ ಕೊಹ್ಲಿ ಹೇಳುವ ರೀತಿ ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೆ ಸುದ್ದಿ ಮಾಧ್ಯಮ ನಿರೂಪಕಿಯೊಬ್ಬರ ಶಬ್ಧವನ್ನೂ ಎಡಿಟ್‌ ಮಾಡಿದ್ದಾರೆ.

ಈ ಮೊದಲು ಸಚಿನ್‌ ತೆಂಡುಲ್ಕರ್ ಅವರು ಕೂಡಾ ಬೆಟ್ಟಿಂಗ್‌ ಆ್ಯಪ್‌ ಬಗ್ಗೆ ಪ್ರಚಾರ ಮಾಡುವ ರೀತಿ ವಿಡಿಯೋ ಹರಿಬಿಡಲಾಗಿತ್ತು. ಬಳಿಕ ತಂತ್ರಜ್ಞಾನದ ದುರ್ಬಳಕೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದ ಸಚಿನ್‌, ಡೀಪ್‌ ಫೇಕ್‌ ಹಾಗೂ ತಪ್ಪು ಮಾಹಿತಿ ಹರಡುವಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು.

ಇನ್ನು ಕೊಹ್ಲಿ ಅಭಿಮಾನಿಗಳಿಗೆ ವಿಶೇಷ ಸಿಹಿ ಸುದ್ದಿಯೆಂದರೇ, ವಿರಾಟ್‌ ಕೊಹ್ಲಿ ಅವರ ಪತ್ನಿ, ಖ್ಯಾತ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿರಾಟ್‌ ಕೊಹ್ಲಿ ಮಂಗಳವಾರ ಸಾಮಾಜಿಕ ತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಫೆ.15ರಂದು ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್‌ ಎಂದು ನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ.

https://twitter.com/CrickologyNews/status/1759878753587700183/photo/1

 

Ashitha S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

25 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

48 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago