ಹೊಸದಿಲ್ಲಿ: ನಿನ್ನೆ ನಡೆದ ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ವಿರುದ್ಧ 5 ವಿಕೆಟ್‌ಗಳ ಜಯ ಗಳಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನ್ ಎಂಟು ವಿಕೆಟ್ ಕಳೆದುಕೊಂಡು 193 ರನ್ ಗಳಿಸಿದರೆ, ಡೆಲ್ಲಿ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು. ಈ ಜಯದೊಂದಿಗೆ ಡೆಲ್ಲಿ ಎಂಟನೇ ಸ್ಥಾನದಿಂದ ಏಳನೇ ಸ್ಥಾನಕ್ಕೇರಿದೆ. ರಾಜಸ್ಥಾನ್ ಐದರಿಂದ ಆರನೇ ಸ್ಥಾನಕ್ಕೆ ಕುಸಿದಿದೆ.
ಡೆಲ್ಲಿ ಪರ ಅಭಿಷೇಕ್ ಪೊರೆಲ್ (51 ರನ್, 31 ಎಸೆತ, 7 ಫೋರ್, 1 ಸಿಕ್ಸ್), ಕೆ.ಎಲ್. ರಾಹುಲ್ (56, 42 ಎಸೆತ, 1 ಫೋರ್, 3 ಸಿಕ್ಸರ್) ಅರ್ಧಶತಕ ಸಿಡಿಸಿದರೆ, ಕೊನೆಯಲ್ಲಿ ಅಕ್ಷರ್ ಪಟೇಲ್ (34, 18 ಎಸೆತ) ಮತ್ತು ಅಶುತೋಶ್ ಶರ್ಮ (ಅಜೇಯ 18, 5 ಎಸೆತ, 1 ಫೋರ್, 2 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ನಡೆಸಿದರು.

