ಕೊಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಬಲಗೈ ವೇಗದ ಬೌಲರ್ ಆಗಿದ್ದ ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ (ಜುಲೈ 16) ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ. ಪೊಲೀಸರು ಇನ್ನೂ ಶಂಕಿತನನ್ನು ಬಂಧಿಸಿಲ್ಲ. ಪ್ರಸ್ತುತ ಸಮಗ್ರ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
2000ನೇ ಇಸವಿಯಲ್ಲಿ ಶ್ರೀಲಂಕಾ ಅಂಡರ್-19 ತಂಡಕ್ಕೆ ಪಾದಾರ್ಪಣೆ ಮಾಡಿದ ಅವರು ಎರಡು ವರ್ಷಗಳ ಕಾಲ ಅಂಡರ್-19 ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಆಡಿದ್ದಾರೆ.

