Ad

ಪ್ಯಾರಿಸ್​ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್, ದೀಕ್ಷಾ

ಕಳೆದ ವರ್ಷ ಚೀನಾದ ಹ್ಯಾಂಗ್ ಝೂ ನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್ ಅವರು ಇದೀಗ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡದಿದ್ದು ಸಿದ್ಧತೆ ನಡೆಸಿದ್ದಾರೆ ಮತ್ತು ದೀಕ್ಷಾ ದಾಗರ್ (138) ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ.

ನವದೆಹಲಿ: ಕಳೆದ ವರ್ಷ ಚೀನಾದ ಹ್ಯಾಂಗ್ ಝೂ ನಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಪದಕ ಗೆದ್ದ ಕರ್ನಾಟಕದ ಗಾಲ್ಫರ್ ಅದಿತಿ ಅಶೋಕ್ ಅವರು ಇದೀಗ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡದಿದ್ದು ಸಿದ್ಧತೆ ನಡೆಸಿದ್ದಾರೆ ಮತ್ತು ದೀಕ್ಷಾ ದಾಗರ್ (138) ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ.

Ad
300x250 2

ಅದಿತಿಗೆ ಇದು ಒಲಿಂಪಿಕ್ಸ್‌ನಲ್ಲಿ ಮೂರನೇ ಬಾರಿಗೆ ಕಾಣಿಸಿಕೊಂಡರೆ, ದೀಕ್ಷಾ ಎರಡನೇ ಬಾರಿಗೆ ಸ್ಪರ್ಧಿಸಲಿದ್ದಾರೆ. ಟೋಕಿಯೋ ಗೇಮ್ಸ್ 2020 ರಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಅದಿತಿ ಅವರಿಂದ ಒಲಿಂಪಿಕ್ಸ್‌ನಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವಾಗಿದೆ.ಬೆಂಗಳೂರಿನ ಅದಿತಿ ಅಶೋಕ್ ಏಷ್ಯನ್ ಗೇಮ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದು ಈ ಕ್ರೀಡಾಕೂಟದ ಗಾಲ್ಫ್ ಕ್ರೀಡೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ದಾಖಲೆ ಬರೆದಿದ್ದರು. 27 ವರ್ಷ ವಯಸ್ಸಿನ ಶರ್ಮಾ ಮತ್ತು 36 ವರ್ಷ ವಯಸ್ಸಿನ ಭುಲ್ಲರ್ ಅವರಿಗೆ ಇದು ಮೊದಲ ಒಲಿಂಪಿಕ್ಸ್‌ ಆಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ ಉದ್ಘಾಟನಾ ಸಮಾರಂಭ ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ.

Ad
Ad
Nk Channel Final 21 09 2023
Ad