News Karnataka Kannada
Tuesday, April 30 2024
ಕ್ರೀಡೆ

ಭಾರತ-ಪಾಕ್‌ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆಗೆ ಗೌರವ ಸಲ್ಲಿದ ಪರಿ ಹೇಗಿತ್ತು ಗೊತ್ತ ?

Do you know how the national anthem was honoured before the India-Pakistan match?
Photo Credit : News Kannada

ಅಹ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಈಗಾಗಲೇ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡ ಕಾರಣ ಪಾಕ್ ಬ್ಯಾಟಿಂಗ್ ಶುರು ಮಾಡಿದೆ. ಪಂದ್ಯ ಆರಂಭಕ್ಕೂ ಮುನ್ನ ಉಭಯ ತಂಡಗಳ ಎಲ್ಲ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆ ಹಾಡಿ ಗೌರವ ಸೂಚಿಸುವುದು ವಾಡಿಕೆ. ಅದರಂತೆ ಈ ಪಂದ್ಯದಲ್ಲಿ ಕೂಡ ರಾಷ್ಟ್ರಗೀತೆ ಪ್ರಸಾರ ಮಾಡಲಾಯಿತು.

ಈ ಸಂದರ್ಭ ಅಪರೂಪದ ಘಟನೆ ನಡೆದಿದೆ. ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಒಂದಾಗಿರುವ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಭಾರತ-ಪಾಕ್ ಪಂದ್ಯಕ್ಕೆ ಹೌಸ್​ಫುಲ್ ಆಗಿದೆ. ಸುಮಾರು 1 ಲಕ್ಷದ ಮೂವತ್ತು ಸಾವಿರ ಮಂದಿ ಕುಳಿತು ಪಂದ್ಯ ವೀಕ್ಷಿಸಬಹುದಾದ ಈ ಮೈದಾನದಲ್ಲಿ ಭಾರತದ ರಾಷ್ಟ್ರಗೀತೆ ಪ್ರಸಾರವಾದಾಗ ನೂತನ ದಾಖಲೆ ನಿರ್ಮಾಣವಾಯಿತು. ಭಾರತೀಯ ಆಟಗಾರರು ಮೈದಾನದಲ್ಲಿ ನಿಂತು ರಾಷ್ಟ್ರಗೀತೆಗೆ ಗೌರವ ಸೂಚಿಸುವಾಗ, ಮೈದಾನದಲ್ಲಿ ನೆರದಿದ್ದ 1 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ರಾಷ್ಟ್ರಗೀತೆಗೆ ದನಿಯಾದ ಅಪರೂಪದ ಘಟನೆ ನಡೆಯಿತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು