Categories: ಕ್ರೀಡೆ

ಯಾವ ಪಂದ್ಯದ ಮೂಲಕ ರಿಷಭ್ ಪಂತ್ ಕಮ್​ಬ್ಯಾಕ್ ಮಾಡಲಿದ್ದಾರೆ ಗೊತ್ತ ?

ಭಾರತ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ರಿಷಭ್ ಕಮ್​ಬ್ಯಾಕ್​ಗೆ ವೇದಿಕೆ ಸಜ್ಜಾಗಿದೆ. ಶೀಘ್ರದಲ್ಲೇ ರಿಷಭ್ ಪುನರಾಗಮನ ಮಾಡಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಡಿಸೆಂಬರ್ 31 ರಂದು ಪಂತ್ ಕಾರು ಅಪಘಾತಕ್ಕೆ ಒಳಗಾಗಿದ್ದರು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಈ ಕಾರಣದಿಂದ ಪಂತ್ ಸದ್ಯ ಸಾಗುತ್ತಿರುವ ವಿಶ್ವಕಪ್​ನಲ್ಲಿ ಕೂಡ ಆಡುತ್ತಿಲ್ಲ. ಆದರೆ ಶೀಘ್ರದಲ್ಲೇ ರಿಷಭ್ ಪಂದ್ಯಕ್ಕೆ ಮರಳುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇನ್​ಸೈಡ್ ಸ್ಪೋರ್ಟ್ಸ್ ಮಾಡಿರುವ ವರದಿಯ ಪ್ರಕಾರ, ಪಂತ್ ಅವರು ದೇಶೀಯ ಕ್ರಿಕೆಟ್‌ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ. ನಂತರ ಅವರು ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ. ನವೆಂಬರ್ 23 ರಿಂದ ಡಿಸೆಂಬರ್ 16 ರವರೆಗೆ ನಡೆಯಲಿರುವ ಭಾರತದ ದೇಶೀಯ ಏಕದಿನ ಪಂದ್ಯಾವಳಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಂತ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಪಂತ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುವ ಮೂಲಕ ತಮ್ಮ ಲಯ ಕಂಡುಕೊಳ್ಳಲಿದ್ದಾರೆ. ನಂತರ ಅವರು ಮುಂದಿನ ವರ್ಷ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಕ್ಕೆ ಸೇರಲಿದ್ದಾರಂತೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ.

Gayathri SG

Recent Posts

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

6 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

11 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

29 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

31 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

52 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

1 hour ago