ಕ್ರೀಡೆ

ನೆದರ್ಲೆಂಡ್ಸ್ ವಿರುದ್ಧ ಇಂಗ್ಲೆಂಡ್ ಗೆ 160ರನ್ ಗಳ ಭರ್ಜರಿ ಜಯ

ಪುಣೆ: ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ಟೂರ್ನಿಯಲ್ಲಿ ಸತತ ಸೋಲುಗಳಿಂದ ಕೆಂಗೆಟ್ಟು ಟೂರ್ನಿಯಿಂದ ಹೊರಬಿದ್ದಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಕೊನೆಗೂ ಗೆಲುವಿನ ನಗೆ ಬೀರಿದ್ದು, ನೆದರ್ಲೆಂಡ್ಸ್ ತಂಡದ ವಿರುದ್ಧ 160ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಪುಣೆಯಲ್ಲಿ ಇಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 340ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನೆದರ್ಲೆಂಡ್ಸ್ ತಂಡ 37.2 ಓವರ್ ನಲ್ಲಿ ಕೇವಲ 179 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಬರೊಬ್ಬರಿ 160ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ನೆದರ್ಲೆಂಡ್ ಪರ ವೆಸ್ಲಿ ಬ್ಯಾರೆಸಿ 37 ರನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 33 ರನ್, ನಾಯಕ ಸ್ಕಾಟ್ ಎಡ್ವರ್ಡ್ಸ್ 38 ರನ್ ಮತ್ತು ತೇಜ ನಿಡಮನೂರು ಅಜೇಯ 41ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ನಿಂದಲೂ ಉತ್ತಮ ಪ್ರದರ್ಶನ ಮೂಡಿಬರಲಿಲ್ಲ.

Ashika S

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

12 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

22 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

35 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago