ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸಿಎಸ್ಕೆ ತಂಡದ ಅಭಿಮಾನಿಗಳಿಗೆ ತಳಮಳ ಶುರುವಾಗಿದೆ.
ನನಗೆ 37 ವರ್ಷ, ಆಸ್ಟ್ರೇಲಿಯಾ ವಿರುದ್ಧ ನಡೆಯುವ ಸರಣಿಗೆ ನಾನು ಆಯ್ಕೆ ಆಗಿಲ್ಲ. ನಾನು ಇಂಗ್ಲೆಂಡ್ಗಾಗಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಈಗ ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡುವ ಸಮಯ. ನಾನು ನಿವೃತ್ತಿ ಪಡೆಯಲು ಇದು ಸರಿಯಾದ ಸಮಯ. ನನ್ನ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಮೊಯಿನ್ ಅಲಿ ಹೇಳಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ತಿಳಿಸಿರುವಂತೆ ಮೊಯಿನ್ ಅಲಿ ಮುಂದಿನ ದಿನಗಳಲ್ಲಿ ಕೋಚ್ ಆಗಿ ಕ್ರಿಕೆಟ್ನಲ್ಲಿ ಮುಂದುವರಿಯಲು ಇಷ್ಟಪಟ್ಟಿದ್ದಾರೆ. ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮಾತ್ರ ವಿದಾಯ ಹೇಳಿದ್ದಾರೆ.
Ad