ಇಂಗ್ಲೆಂಡ್: ಏಕದಿನ ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಇದರ ನಡುವೆ ತಂಡದ ಪ್ರಮುಖ ಆಟಗಾರ ಡೇವಿಡ್ ವಿಲ್ಲಿ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇಂಗ್ಲೆಂಡ್ ತಂಡದ ಪ್ರಮುಖ ಆಲ್ರೌಂಡರ್ಗಳಲ್ಲಿ ಒಬ್ಬರಾಗಿರುವ ವಿಲ್ಲಿ, ಈ ಬಾರಿಯ ವಿಶ್ವಕಪ್ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ.
ನಾನು ಬಾಲ್ಯದಿಂದಲೂ ಇಂಗ್ಲೆಂಡ್ ಪರ ಆಡಬೇಕೆಂಬ ಕನಸು ಕಂಡಿದ್ದೆ. ಈ ಕನಸುಗಳು ಈಡೇರಿವೆ. ಇದೀಗ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದೆ. ಅದರಂತೆ ವಿಶ್ವಕಪ್ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ತಿಳಿಸಿದ್ದಾರೆ.
ಅದರಂತೆ ಈ ಬಾರಿಯ ವಿಶ್ವಕಪ್ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಪಂದ್ಯವು ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಮೂಲಕ 33 ವರ್ಷದ ಎಡಗೈ ಆಲ್ರೌಂಡರ್ ಇಂಟರ್ನ್ಯಾಷನಲ್ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
Thank you, David Willey ❤️ pic.twitter.com/4wkeVGAYXq
— England Cricket (@englandcricket) November 1, 2023