Categories: ಕ್ರೀಡೆ

ದಿಢೀರ್ ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ನ ಸ್ಟಾರ್ ಆಟಗಾರ

ಇಂಗ್ಲೆಂಡ್: ಏಕದಿನ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಇದರ ನಡುವೆ ತಂಡದ ಪ್ರಮುಖ ಆಟಗಾರ ಡೇವಿಡ್ ವಿಲ್ಲಿ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಇಂಗ್ಲೆಂಡ್ ತಂಡದ ಪ್ರಮುಖ ಆಲ್​ರೌಂಡರ್​ಗಳಲ್ಲಿ ಒಬ್ಬರಾಗಿರುವ ವಿಲ್ಲಿ, ಈ ಬಾರಿಯ ವಿಶ್ವಕಪ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ.

ನಾನು ಬಾಲ್ಯದಿಂದಲೂ ಇಂಗ್ಲೆಂಡ್ ಪರ ಆಡಬೇಕೆಂಬ ಕನಸು ಕಂಡಿದ್ದೆ. ಈ ಕನಸುಗಳು ಈಡೇರಿವೆ. ಇದೀಗ ನಿವೃತ್ತಿ ಹೊಂದುವ ಬಗ್ಗೆ ಯೋಚಿಸಿದೆ. ಅದರಂತೆ ವಿಶ್ವಕಪ್‌ನ ಕೊನೆಯಲ್ಲಿ ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಡೇವಿಡ್ ವಿಲ್ಲಿ ತಿಳಿಸಿದ್ದಾರೆ.

ಅದರಂತೆ ಈ ಬಾರಿಯ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ನಡೆಯಲಿರುವ ಪಂದ್ಯವು ಡೇವಿಡ್ ವಿಲ್ಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ. ಈ ಮೂಲಕ 33 ವರ್ಷದ ಎಡಗೈ ಆಲ್​ರೌಂಡರ್ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

Gayathri SG

Recent Posts

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

15 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

36 mins ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

54 mins ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

1 hour ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

2 hours ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

2 hours ago