News Karnataka Kannada
Wednesday, April 24 2024
Cricket
ಕ್ರೀಡೆ

ಭೀಕರ ಕಾರು ಅಪಘಾತ: ಭಾರತದ ಮಾಜಿ ಕ್ರಿಕೆಟಿಗ ಗ್ರೇಟ್‌ ಎಸ್ಕೇಪ್

ex cricketer praveen kumar
Photo Credit : By Author

ಲಕ್ನೋ: ಮೀರತ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ರಾತ್ರಿ ಅವರ ವಾಹನಕ್ಕೆ ಟ್ರಕ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಪ್ರವೀಣ್ ಕುಮಾರ್ ಮತ್ತು ಅವರ ಮಗ ಇಬ್ಬರೂ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆದರೆ ಅವರ ಕಾರು ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.‌

ವೇಗದ ಬೌಲರ್ ಆಗಿ ತನ್ನ ಕೌಶಲ್ಯಕ್ಕೆ ಹೆಸರುವಾಸಿಯಾದ ಪ್ರವೀಣ್ ಕುಮಾರ್, 6 ಟೆಸ್ಟ್ ಪಂದ್ಯಗಳು, 68 ಏಕದಿನ ಅಂತಾರಾಷ್ಟ್ರೀಯ (ODI) ಮತ್ತು 10 ಟಿ20 ಅಂತಾರಾಷ್ಟ್ರೀಯ (T20Is) ಪಂದ್ಯಗಳಲ್ಲಿ ಪ್ರವೀಣ್‌ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ 119 ಪಂದ್ಯಗಳನ್ನಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು