ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ಗೆ ದಿನಗಣನೆ ಆರಂಭಗೊಂಡಿದ್ದು, ಅ.5 ರಿಂದ ಏಕದಿನ ವಿಶ್ವಕಪ್ ಆರಂಭವಾಗಲಿದೆ. ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.
ಈ ನಿಟ್ಟಿನಲ್ಲಿ ಯಾರು ವಿಶ್ವಕಪ್ ಎತ್ತಿ ಹಿಡಿಯುತ್ತಾರೆ ಎಂಬುದು ಸದ್ಯ ಭಾರಿ ಕುತೂಹಲ ಕೆರಳಿಸಿದೆ. ಹತ್ತು ತಂಡಗಳು ಪಂದ್ಯಾವಳಿಗೆ ಅರ್ಹತೆ ಪಡೆದಿದ್ದು, 48 ದಿನಗಳವರೆಗೆ ಈ ವಿಶ್ವ ಸಮರ ಭಾರತದಲ್ಲಿ ನಡೆಯಲಿದೆ. ಇಲ್ಲಿಯವರೆಗೆ ವೆಸ್ಟ್ ಇಂಡೀಸ್ ಎರಡು ಬಾರಿ, ಭಾರತ ಎರಡು ಬಾರಿ, ಆಸ್ಟ್ರೇಲಿಯಾ 4 ಬಾರಿ, ಪಾಕಿಸ್ತಾನ ಒಮ್ಮೆ, ಶ್ರೀಲಂಕಾ ಒಂದು ಮತ್ತು ಇಂಗ್ಲೆಂಡ್ ಒಂದು ಬಾರಿ ವಿಶ್ವಕಪ್ ಗೆದ್ದಿದೆ.
ಈ ವರ್ಷ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳನ್ನು ವಿಶ್ವಕಪ್ ಗೆಲ್ಲುವ ಸ್ಪರ್ಧಿಗಳೆಂದು ಪರಿಗಣಿಸಲಾಗಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಸುನಿಲ್ ಗವಾಸ್ಕರ್ ಈ ಬಾರಿಯ ಪ್ರಶಸ್ತಿ ಗೆಲ್ಲುವ ತಮ್ಮ ನೆಚ್ಚಿನ ತಂಡಗಳ ಹೆಸರನ್ನು ಪ್ರಕಟಿಸಿದ್ದಾರೆ.
ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ‘ಈ ವರ್ಷದ ಪ್ರಶಸ್ತಿಗಾಗಿ ಇಂಗ್ಲೆಂಡ್ ಪ್ರಮುಖ ಸ್ಪರ್ಧಿಯಾಗಿದೆ. ಇಂಗ್ಲೆಂಡ್ ತಂಡ ಉತ್ತಮ ಸಾಮರ್ಥ್ಯ ಹೊಂದಿದೆ. ಆಟಗಾರರ ಸಾಮರ್ಥ್ಯವನ್ನು ಪರಿಗಣಿಸಿದರೆ ಇಂಗ್ಲೆಂಡ್ ತಂಡ ಮೇಲುಗೈ ಸಾಧಿಸಲಿದೆ. ಅವರ ಅಗ್ರ ಕ್ರಮಾಂಕ, ಮಧ್ಯಮ ಕ್ರಮಾಂಕ ಮತ್ತು ಮೂವರು ವಿಶ್ವ ದರ್ಜೆಯ ಆಲ್ರೌಂಡರ್ಗಳು ಪಂದ್ಯ ಗೆಲ್ಲುವ ಸಾಮರ್ಥ್ಯವನ್ನು ಹೊಂದಿದ್ದಾರೆ.
ಅಲ್ಲದೆ, ಬೌಲಿಂಗ್ ತಂಡದಲ್ಲಿ ಅನುಭವಿ ಬೌಲರ್ಗಳಿದ್ದಾರೆ’. ಹೀಗಾಗಿ ಈ ಬಾರಿ ವಿಶ್ವಕಪ್ ಗೆಲ್ಲುವ ನನ್ನ ನೆಚ್ಚಿನ ತಂಡವೆಂದರೆ ಅದು ಇಂಗ್ಲೆಂಡ್ ಎಂದು ಹೇಳಿದ್ದಾರೆ.