Bengaluru 21°C
Ad

ಪ್ಯಾರಾಲಿಂಪಿಕ್ಸ್: ಹೈ ಜಂಪ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಪ್ಯಾರಿಸ್ ನಲ್ಲಿ ಶುಕ್ರವಾರ ನಡೆದ ಹೈ ಜಂಪ್ ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ದಾಖಲೆಯ 2.08 ಮೀಟರ್‌ಗಳಷ್ಟು ಎತ್ತರಕ್ಕೆ ಜಿಗಿದಿದ್ದಾರೆ.

ಪ್ಯಾರಿಸ್: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಪ್ಯಾರಿಸ್ ನಲ್ಲಿ ಶುಕ್ರವಾರ ನಡೆದ ಹೈ ಜಂಪ್ ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ದಾಖಲೆಯ 2.08 ಮೀಟರ್‌ಗಳಷ್ಟು ಎತ್ತರಕ್ಕೆ ಜಿಗಿದಿದ್ದಾರೆ. ಈ ಮೂಲಕ ಅಗ್ರ ಸ್ಥಾನಕ್ಕೇರಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ನೊಯ್ಡಾದ 21ರ ಹರೆಯದ ಪ್ರವೀಣ್ ಕುಮಾರು ಹುಟ್ಟಿನಿಂದಲೇ ಕುಬ್ಜ ಕಾಲುಗಳನ್ನು ಹೊಂದಿದ್ದಾರೆ. ಆದಾಗ್ಯೂ ತಮ್ಮ ಅಂಗವೈಕಲ್ಯವನ್ನು ಮೀರಿದ ಸಾಧನೆ ಮಾಡಿದ್ದಾರೆ. ಹಾಲಿ ಕ್ರೀಡಾಕೂಟದಲ್ಲಿ ಭಾರತ ಒಟ್ಟು 26 ಪದಕಗಳನ್ನು ಜಯಿಸಿದ್ದು, ಈ ಪೈಕಿ 6 ಚಿನ್ನ, 9 ಬೆಳ್ಳಿ, 11 ಕಂಚಿನ ಪದಕಗಳು ಸೇರಿವೆ.

Ad
Ad
Nk Channel Final 21 09 2023