ಬೆಂಗಳೂರು: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾರತ, ನೇಪಾಳ, ಭೂತಾನ್, ದುಬೈ, ಶ್ರೀಲಂಕಾ ಮತ್ತು ಬಾಂಗ್ಲಾ ಸೇರಿದಂತೆ 6 ದೇಶದ ಸ್ಪರ್ಧಿಗಳು ಭಾಗವಹಿಸಿದ್ದರು.
ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ (ಎಕೆಎಸ್‌ಕೆಎ) ನ ಕರ್ನಾಟಕ ರಾಜ್ಯ ಕ್ರೀಡಾ ಆಯೋಗದ ಉಪಾಧ್ಯಕ್ಷ ಹಾಗೂ ರಾಷ್ಟ್ರೀಯ ತೀರ್ಪುಗಾರ ರೆನ್ಶಿ ಜೈನ್ ನೇತೃತ್ವದ ಸುಡೋಕನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಪ್ರತಿನಿಧಿಸಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಹಸನೈನ್ ಅದ್ವಿತೀಯ ಪ್ರದರ್ಶನ ನೀಡಿದರು.ಹಸನೈನ್ ಬೆಂಗಳೂರಿನ ಬಾಲ್ಡ್‌ವಿನ್ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, ಏಳು ವರ್ಷದ ಕಟಾ ವಿಭಾಗದಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
Ad