ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್ ಸಾಧಿಸುವುದು ಕಷ್ಟಕರ.
ಏಕದಿನ ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್ನಿಂದ ಹೊರಗುಳಿದಿದ್ದರು.
ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಆಡಲಿಲ್ಲ.
ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಖಚಿತವಾಗಿದೆ. ಅವರು ಸಂಪೂರ್ಣ ಫಿಟ್ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ.ಹೀಗಾಗಿ ಐಪಿಎಲ್ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು.