ಕಳೆದ ಎರಡು ದಿನಗಳಿಂದ ಗೌತಮ್‌ ಗಂಭೀರ್ ಅವರು ಮುಂದಿನ ಮುಖ್ಯ ಕೋಚ್ ಆಗಲು ಗಂಭೀರ್ ಸಿದ್ಧರಿದ್ದಾರೆ ಎಂದು ಹೇಳಲಾಗುತ್ತಿದೆ.ಆದರೆ ಇದುವರೆಗೂ ಗಂಭೀರ್ ಈ ಬಗ್ಗೆ ಏನನ್ನೂ ಹೇಳಿಲ್ಲ ಅಥವಾ ಬಿಸಿಸಿಐನಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆದರೆ ಇದೀಗ ಮೊದಲ ಬಾರಿಗೆ ಗಂಭೀರ್, ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಗಂಭೀರ್ ದುಬೈನಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮಗುವೊಂದು, ನೀವು ಟೀಮ್ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಲು ಬಯಸುತ್ತೀರಾ ಮತ್ತು ಭಾರತ ತಂಡವನ್ನು ವಿಶ್ವಕಪ್ ಗೆಲ್ಲಲು ನೀವು ಏನು ಮಾಡುತ್ತೀರ? ಎಂಬ ಪ್ರಶ್ನೆ ಕೇಳಿದೆ. ಇದಕ್ಕೆ ಉತ್ತರಿಸಿರುವ ಗಂಭೀರ್, ‘ಭಾರತ ತಂಡದ ಮುಖ್ಯ ಕೋಚ್ ಆಗುವ ಅವಕಾಶ ಸಿಕ್ಕರೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಭಾರತ ತಂಡದ ಮುಖ್ಯ ಕೋಚ್ ಆಗುವುದು ಎಂದರೆ 140 ಕೋಟಿ ಭಾರತೀಯರನ್ನು ಪ್ರತಿನಿಧಿಸುವುದು ಎಂದರ್ಥ.ಹೀಗಾಗಿ ಇದು ದೊಡ್ಡ ವಿಷಯ ಎಂದಿದ್ದಾರೆ. ಇದರರ್ಥ ಗಂಭೀರ್ ಭಾರತ ತಂಡದ ಮುಂದಿನ ಮುಖ್ಯ ಕೋಚ್ ಆಗಲು ಸಿದ್ಧರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.