News Karnataka Kannada
Monday, April 29 2024
ಕ್ರೀಡೆ

5ನೇ ಟೆಸ್ಟ್‌ ಪಂದ್ಯ: ಹೊಸ ದಾಖಲೆ ಸೃಷ್ಟಿಸುವ ಭರವಸೆಯಲ್ಲಿ ಹಿಟ್‌ ಮ್ಯಾನ್‌

ಭಾರತ ಮತ್ತು ಇಂಗ್ಲೇಂಡ್‌ ನಡುವಿನ 5ನೇ ಟೆಸ್ಟ್‌ ಪಂದ್ಯ ಮಾರ್ಚ್‌ 7 ರಂದು ಆರಂಭವಾಗಲಿದೆ. ಈ ಪಂದ್ಯವು ಧರ್ಮಶಾಲಾ ಕ್ರೀಡಾಂಗಣ ದಲ್ಲಿ ನಡೆಯಲಿದೆ. ಈ ಪಂದ್ಯದ ಮೂಲಕ ರೋಹಿತ್‌ ಶರ್ಮಾ ಹೊಸ ದಾಖಲೆ ಬರೆಯುವ ಅವಕಾಶ ಇದೀಗ ಅವರ ಮುಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.
Photo Credit : News Kannada

ಧರ್ಮಶಾಲಾ:   ಭಾರತ ಮತ್ತುಇಂಗ್ಲೆಂಡ್ ನಡುವಿನ 5ನೇ ಟೆಸ್ಟ್‌ ಪಂದ್ಯ ಮಾರ್ಚ್‌ 7 ರಂದು ಆರಂಭವಾಗಲಿದೆ. ಈ ಪಂದ್ಯವು ಧರ್ಮಶಾಲಾ ಕ್ರೀಡಾಂಗಣ ದಲ್ಲಿ ನಡೆಯಲಿದೆ. ಈ ಪಂದ್ಯದ ಮೂಲಕ ರೋಹಿತ್‌ ಶರ್ಮಾ ಹೊಸ ದಾಖಲೆ ಬರೆಯುವ ಅವಕಾಶ ಇದೀಗ ಅವರ ಮುಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.

ಇದುವರೆಗಿನ ಪಂದ್ಯದಲ್ಲಿ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ 53 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 49 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಎಂಬುದು ವಿಶೇಷ. ಸ್ಟೋಕ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 44 ಪಂದ್ಯಗಳಲ್ಲಿ 81 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 78 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಸಿಕ್ಸ್ ಬಾರಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ. ಕೇವಲ 8 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್ ಈಗಾಗಲೇ 26 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಇದುವರೆಗಿನ 5 ಟೆಸ್ಟ್‌ ಪಂದ್ಯಗಳಲ್ಲಿ ಸರಣಿಯಲ್ಲಿ ಇಂಡಿಯಾ ಟೀಮ್ ನ ಆಟ ನೋಡುವುದಾದರೆ, ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಭಾರತ ತಂಡ ಜಯ ಸಾಧಿಸಿತ್ತು. ಅದರಂತೆ 3-1 ಅಂತರದಿಂದ ಟೀಮ್ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಈಗ 5ನೇ ಪಂದ್ಯದ ಟ್ರೋಫಿ ತನ್ನದಾಗಿಸುವ ಭರವಸೆಯಲ್ಲಿದೆ ಇಂಡಿಯಾ ಟೀಮ್‌.

ಇಂಗ್ಲೆಂಡ್ ತಂಡವು ಕೊನೆಯ ಪಂದ್ಯದಲ್ಲಿ ಗೆಲ್ಲುವ ಭರವಸೆಯಲ್ಲಿದೆ . ಹಾಗಾಗಿ ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು