News Karnataka Kannada
Tuesday, April 30 2024
ಕ್ರೀಡೆ

ಹೈದರಾಬಾದ್: ಐಪಿಎಲ್‌ ಬೆಟ್ಟಿಂಗ್‌, 10 ಬುಕ್ಕಿಗಳ ಬಂಧನ

10 bookies arrested for betting on IPL
Photo Credit : IANS

ಹೈದರಾಬಾದ್: ಆನ್‌ಲೈನ್ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಸೈಬರಾಬಾದ್ ಪೊಲೀಸರು ಭೇದಿಸಿದ್ದು, 10 ಬುಕ್ಕಿಗಳನ್ನು ಬಂಧಿಸಿದ್ದಾರೆ. ಆರ್‌ಸಿಬಿ ಮತ್ತು ಲಕ್ನೋ ಸೂಪರ್‌ ಜೈಂಟ್ಸ್ ನಡುವಿನ ಐಪಿಎಲ್ ಪಂದ್ಯದ ವೇಳೆ ಸೋಮವಾರ ಬಾಚುಪಲ್ಲಿಯ ಮನೆಯಲ್ಲಿ ಬೆಟ್ಟಿಂಗ್‌ ದಂಧೆ ನಡೆಯುತ್ತಿತ್ತು.

ಸೈಬರಾಬಾದ್ ಪೊಲೀಸ್ ಕಮಿಷನರ್ ಸ್ಟೀಫನ್ ರವೀಂದ್ರ ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿಕೆ ನೀಡಿದ್ದು, ಬಾಚುಪಲ್ಲಿಯ ಸಾಯಿ ಅನುರಾಗ್ ಕಾಲೋನಿಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿ 10 ಬುಕ್ಕಿಗಳನ್ನು ಬಂಧಿಸಿ 60.39 ಲಕ್ಷ ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬಂಧಿತರ ಬ್ಯಾಂಕ್ ಖಾತೆಯಲ್ಲಿನ ಮೊತ್ತ, ಆನ್‌ಲೈನ್ ನಗದು ಮತ್ತು ವಶಪಡಿಸಿಕೊಂಡ ಆಸ್ತಿಯ ಮೌಲ್ಯ ಸುಮಾರು 1 ಕೋಟಿ ರೂ. ಆಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು