ಚೆನ್ನೈ: ಶುಕ್ರವಾರ ನಡೆದ ಐಪಿಎಲ್ನ ಕ್ವಾಲಿಫೈಯರ್-2 ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಮೇ 26ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೆಣಸಾಡಲಿದೆ.
ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಸನ್ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗೆ 175 ರನ್ ಬಾರಿಸಿತು. ಜವಾಬಿತ್ತ ರಾಜಸ್ಥಾನ್ ಉತ್ತಮ ಆರಂಭ ಪಡೆದರೂ ಕೂಡ ಆ ಬಳಿಕ ನಾಟಕೀಯ ಕುಸಿತ ಕಂಡು 7 ವಿಕೆಟ್ ನಷ್ಟಕ್ಕೆ 139 ರನ್ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.
ಟ್ರಾವಿಸ್ ಹೆಡ್ 28 ಎಸೆತಗಳಲ್ಲಿ 34 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 5 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ರಾಹುಲ್ ತ್ರಿಪಾಠಿ 15 ಎಸೆಗಳಲ್ಲಿ 5 ಬೌಂಡರಿ 2 ಸಿಕ್ಸರ್ ಸಹಿತ ಸ್ಫೋಟಕ 37 ರನ್ ಗಳಿಸಿದರೂ, ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಟ್ರೆಂಟ್ ಬೌಲ್ಟ್ ತಮ್ಮ ಮೊದಲ ಮೂರು ಓವರ್ ಗಳಲ್ಲಿ ಮೂರು ವಿಕೆಟ್ ಪಡೆದು ಸನ್ರೈಸರ್ಸ್ ಹೈದರಾಬಾದ್ಗೆ ಆಘಾತ ನೀಡಿದರು.
176 ರನ್ಗಳನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ಗೆ ಸನ್ರೈಸರ್ಸ್ ಹೈದರಾಬಾದ್ ಬೌಲರ್ ಗಳು ಆಘಾತ ನೀಡಿದರು. ಯಶಸ್ವಿ ಜೈಸ್ವಾಲ್ 21 ಎಸೆತಗಳಲ್ಲಿ 42 ರನ್ ಗಳಿಸಿದರೆ, ಧ್ರುವ್ ಜುರೆಲ್ 35 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದರು. ಉಳಿದಂತೆ ಯಾವ ಬ್ಯಾಟರ್ ಕೂಡ ಹೆಚ್ಚಿನ ರನ್ ಗಳಿಸಲಿಲ್ಲ.
ಟಾಮ್ ಕೊಹ್ಲರ್ ಕಾಡ್ಮೋರ್ 10 ರನ್, ಸಂಜು ಸ್ಯಾಮ್ಸನ್ 10 ರನ್, ರಿಯಾನ್ ಪರಾಗ್ 6 ರನ್, ರವಿಚಂದ್ರನ್ ಅಶ್ವಿನ್ 0, ಶಿಮ್ರಾನ್ ಹೆಟ್ಮೆಯರ್ 4 ರನ್, ರೋವ್ಮನ್ ಪೊವೆಲ್ 6 ರನ್ ರನ್ ಗಳಿಸಿದರು.
ಶಹಬಾಜ್ ಅಹ್ಮದ್ 4 ಓವರ್ ಗಳಲ್ಲಿ 23 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರು. ಅಭಿಷೇಕ್ ಶರ್ಮಾ 4 ಓವರ್ ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದುಕೊಂಡರು. ಪಾಟ್ ಕಮ್ಮಿನ್ಸ್ ಮತ್ತು ಟಿ ನಟರಾಜನ್ ತಲಾ ಒಂದು ವಿಕೆಟ್ ಪಡೆದುಕೊಂಡರು.