Bengaluru 27°C

ಆರ್​ಸಿಬಿ ಸೇರುವ ಬಗ್ಗೆ ಹೇಳಿಕೆ ನೀಡಿದ ರಿಂಕು ಸಿಂಗ್

Rink

ಐಪಿಎಲ್ 2025ರ ಮೆಗಾ ಹರಾಜಿಗಾಗಿ ರೂಪುರೇಷೆಗಳು ಸಿದ್ಧವಾಗುತ್ತಿದೆ. ಈ ರೂಪುರೇಷೆಗಳ ಸಿದ್ಧತೆಯ ಬಳಿಕ ಎಲ್ಲಾ ಫ್ರಾಂಚೈಸಿಗಳಿಗೆ ಇಂತಿಷ್ಟು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿಯ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ 4+2 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ.


ಅಂದರೆ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ನಾಲ್ವರನ್ನು ನೇರವಾಗಿ ರಿಟೈನ್ ಮಾಡಿಕೊಳ್ಳಬಹುದು. ಇನ್ನುಳಿದ ಇಬ್ಬರು ಆಟಗಾರರನ್ನು ಆರ್​ಟಿಎಂ ಕಾರ್ಡ್​ ಬಳಸಿ ಹರಾಜಿಗೆ ಬಿಡುಗಡೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಂದ 19 ಆಟಗಾರರು ಹೊರಬೀಳುವುದು ಖಚಿತ.


ಹೀಗಾಗಿಯೇ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಿಮ್ಮನ್ನು ರಿಟೈನ್ ಮಾಡಿಕೊಳ್ಳದಿದ್ದರೆ ಯಾವ ತಂಡದ ಪರ ಕಣಕ್ಕಿಳಿಯುತ್ತೀರಿ ಎಂಬ ಪ್ರಶ್ನೆಯನ್ನು ರಿಂಕು ಸಿಂಗ್ ಅವರಲ್ಲಿ ಕೇಳಲಾಗಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಕೆಕೆಆರ್ ದಾಂಡಿಗ ನೀಡಿದ ನೇರ ಉತ್ತರ ಆರ್‌ ಸಿ ಬಿ.


ಹೌದು. . , ಕೆಕೆಆರ್ ತಂಡವು ನನ್ನನ್ನು ರಿಟೈನ್ ಮಾಡದಿದ್ದರೆ, ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವುದನ್ನು ಎದುರು ನೋಡುತ್ತಿದ್ದೇನೆ. ನನಗೆ ಆರ್​ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ರಿಂಕು ಸಿಂಗ್ ಸ್ಪೋರ್ಟ್ಸ್​ ತಕ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ.


ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿರುವ ರಿಂಕು ಸಿಂಗ್ ಅವರನ್ನು ಕೆಕೆಆರ್ ರಿಲೀಸ್ ಮಾಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ 2018 ರಿಂದ ರಿಂಕು ಸಿಂಗ್ ಕೆಕೆಆರ್ ಪರ ಆಡುತ್ತಿದ್ದಾರೆ.


Nk Channel Final 21 09 2023