ಗುವಾಹಾಟಿ: ಭಾರತ ಮತ್ತು ಇಂಗ್ಲೆಂಡ್ ನಡುವೆ ಶನಿವಾರ ನಡೆಯಬೇಕಿದ್ದ ವಿಶ್ವಕಪ್ ಕ್ರಿಕೆಟ್ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಬರ್ಸಾಪರ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಹೊತ್ತಿಗೆ ಸ್ಪಲ್ಪ ಸಮಯ ಮೊದಲು ಮಳೆ ಆರಂಭವಾಯಿತು. ಇದೇ ಕಾರಣದಿಂದ ಸಾಯಂಕಾಲ 6 ಗಂಟೆಯ ಹೊತ್ತಿಗೆ ಪಂದ್ಯವನ್ನು ರದ್ದು ಮಾಡಲಾಯಿತು.
ಈ ಹಿಂದೆ ನಡೆದ ಏಷ್ಯಾಕಪ್ಗೂ (2023) ಮಳೆ ಕಾಟ ನೀಡಿತ್ತು. ಇದರಿಂದ ಹಲವು ಪಂದ್ಯಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ವಿಶ್ವಕಪ್ ಆರಂಭಕ್ಕೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯಗಳಿಗೆ ವರುಣನ ಅವಕೃಪೆ ಎದುರಾಗುತ್ತಿದೆ. ಹೀಗಾಗಿ ಏಷ್ಯಾಕಪ್ನಲ್ಲಿ ಆದ ಅವಾಂತರವೇ ವಿಶ್ವಕಪ್ನಲ್ಲೂ ಆಗುತ್ತಾ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡಲಾರಂಭಿಸಿದೆ.
ಟೂರ್ನಿಯಲ್ಲಿ ಸ್ಪರ್ಧಿಸಲಿರುವ ಹತ್ತು ತಂಡಗಳಿಗೂ ತಲಾ ಎರಡು ಅಭ್ಯಾಸ ಪಂದ್ಯಗಳು ನಡೆಯಲಿವೆ. ಸೋಮವಾರ ನಡೆಯುವ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಬಾಂಗ್ಲಾದೇಶ ಆಡಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…