ಕೋಲ್ಕತ್ತಾ: ಕೋಲ್ತತ್ತಾದ ವಾಂಖೆಡೆ ಸ್ಟೇಡಿಯಂ ಇಂದು ಹೈವೋಲ್ಟೇಜ್ ಪಂದ್ಯವೊಂದಕ್ಕೆ ಸಾಕ್ಷಿಯಾಗಲಿದೆ. ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಟಾಸ್ ಸೋತ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲಿದೆ.
ಭಾರತ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಇದ್ದಾರೆ.