News Karnataka Kannada
Friday, May 10 2024
ಕ್ರೀಡೆ

ವಿಶ್ವಕಪ್‌: ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ ತಂಡ ಭರ್ಜರಿ ಜಯ

Icc Cricket World Cup 2019: Pakistan beat Bangladesh by 7 wickets
Photo Credit : News Kannada

ಕೊಲ್ಕತ್ತ: ಏಕದಿನ ವಿಶ್ವಕಪ್​ನ 31ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ಶಕೀಬ್ ಅಲ್ ಹಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 45.1 ಓವರ್​ಗಳಲ್ಲಿ ಆಲೌಟ್ ಆಯಿತು. 205 ರನ್​ಗಳ ಸುಲಭ ಗುರಿ ಪಡೆದ ಪಾಕಿಸ್ತಾನ್ ಪರ ಆರಂಭಿಕರಾದ ಅಬ್ದುಲ್ ಶಫೀಕ್ (68) ಹಾಗೂ ಫಖರ್ ಝಮಾನ್ (81) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 32.3 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ ತಂಡವು ಗೆಲುವಿನ ದಡ ಸೇರಿತು. ಈ ಮೂಲಕ ಪಾಕಿಸ್ತಾನ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಬಾಂಗ್ಲಾದೇಶ್ ಆಡಿರುವ 7 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿದೆ. ಇದರೊಂದಿಗೆ ಬಾಂಗ್ಲಾದೇಶ್ ತಂಡವು ವಿಶ್ವಕಪ್ ಸೆಮಿಫೈನಲ್ ರೇಸ್​ನಿಂದ ಹೊರಬಿದ್ದಂತಾಗಿದೆ. ಇದಾಗ್ಯೂ ಬಾಂಗ್ಲಾ ತಂಡಕ್ಕೆ ಇನ್ನೆರಡು ಪಂದ್ಯಗಳಿದ್ದು, ಈ ಪಂದ್ಯಗಳ ಮೂಲಕ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು