ಕ್ರೀಡೆ

ಏಕದಿನ ವಿಶ್ವಕಪ್: ಲಂಕಾಗೆ 358 ರನ್ ಟಾರ್ಗೆಟ್

ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಕೇವಲ 4 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಒಂದಾದ ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಶತಕದ ಜೊತೆಯಾಟವನ್ನಾಡಿ ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು.

ಶುಭ್​ಮನ್ ಗಿಲ್ 92 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 92 ರನ್​ಗಳಿಸಿ ಕೇವಲ 8 ರನ್​ಗಳಿಂದ ಶತಕ ವಂಚಿತರಾದರು.ಗಿಲ್ ಅವರೊಂದಿಗೆ ಉತ್ತಮ ಜೊತೆಯಾಟ ಕಟ್ಟಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಶತಕದಂಚಿನಲ್ಲಿ ಎಡವಿದರು. ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 94 ಎಸೆತಗಳನ್ನು ಎದುರಿಸಿ 11 ಬೌಂಡರಿ ಸಹಿತ 88 ರನ್​ಗಳಿಸಿ ಔಟಾದರು. ಶ್ರೇಯಸ್ ಅಯ್ಯರ್ 56 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಹಿತ 82 ರನ್ ಸಿಡಿಸಿ ಔಟಾದರು.‌ ಕೆಎಲ್ ರಾಹುಲ್ 21 ರನ್​ಗಳ ಇನ್ನಿಂಗ್ಸ್ ಆಡಿದರೆ, ಸೂರ್ಯಕುಮಾರ್ ಯಾದವ್ 12 ರನ್, ರವೀಂದ್ರ ಜಡೇಜಾ 35 ರನ್​ಗಳ ಕಾಣಿಕೆ ನೀಡಿದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago