News Karnataka Kannada
Monday, April 29 2024
ಕ್ರೀಡೆ

ಲಂಕಾ ಮಂಡಳಿಗೆ ಮತ್ತೊಂದು ಬಿಗ್ ಶಾಕ್ ನೀಡಿದ ಐಸಿಸಿ

Shrlank
Photo Credit : News Kannada

ದೆಹಲಿ: ಏಕದಿನ ವಿಶ್ವಕಪ್ ನಡುವೆಯೇ ಐಸಿಸಿ ಸದಸ್ಯತ್ವ ಕಳೆದುಕೊಂಡು ಆಘಾತಕ್ಕೆ ಒಳಗಾಗಿದ್ದ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಐಸಿಸಿ ಮತ್ತೊಂದು ಬಿಗ್ ಶಾಕ್ ನೀಡಿದೆ. ಇದೇ ಮೊದಲ ಬಾರಿಗೆ 19 ವರ್ಷದೊಳಗಿನವರ ವಿಶ್ವಕಪ್ ನಡೆಸಲು ತಯಾರಿ ಮಾಡಿಕೊಂಡಿದ್ದ ಶ್ರೀಲಂಕಾ ಮಂಡಳಿಗೆ ಈ ಅವಕಾಶ ಕೈತಪ್ಪಿದೆ.

ಅಂದರೆ ಅಂಡರ್- 19 ವಿಶ್ವಕಪ್ ಆತಿಥ್ಯವನ್ನು ಲಂಕಾ ಮಂಡಳಿ ಕೈಯಿಂದ ಐಸಿಸಿ ಕಿತ್ತುಕೊಂಡಿದ್ದು, ಮುಂದಿನ ಅಂಡರ್-19 ವಿಶ್ವಕಪ್ಪಂ ದ್ಯಾವಳಿಯ ಆತಿಥ್ಯವನ್ನು ದಕ್ಷಿಣ ಆಫ್ರಿಕಾಕ್ಕೆ ನೀಡಲಾಗಿದೆ. ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಅಹಮದಾಬಾದ್​ನಲ್ಲಿ ನಡೆದ ಐಸಿಸಿ ಮಹತ್ವದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಶ್ರೀಲಂಕಾ ಕ್ರಿಕೆಟ್‌ನಲ್ಲಿನ ಆಡಳಿತಾತ್ಮಕ ಅನಿಶ್ಚಿತತೆಯನ್ನು ಗಮನದಲ್ಲಿಟ್ಟುಕೊಂಡು ಐಸಿಸಿ ಈ ನಿರ್ಧಾರ ಕೈಗೊಂಡಿದೆ. ಇದು ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ದೊಡ್ಡ ಹೊಡೆತ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು