News Karnataka Kannada
Monday, April 29 2024
ಕ್ರೀಡೆ

ಏಕದಿನ ವಿಶ್ವಕಪ್​: ಶ್ರೀಲಂಕಾಕ್ಕೆ ದಂಡದ ಬರೆ ಎಳೆದ ಐಸಿಸಿ

ICC imposes fine on Sri Lanka
Photo Credit : IANS

ಶ್ರೀಲಂಕಾ: ಏಕದಿನ ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 102 ರನ್‌ಗಳ ಬೃಹತ್ ಸೋಲು ಕಂಡಿದ್ದ ಶ್ರೀಲಂಕಾ ತಂಡಕ್ಕೆ ಇದೀಗ ಐಸಿಸಿ ದಂಡದ ಬರೆ ಎಳೆದಿದೆ.

ನಿಧಾನಗತಿಯ ಓವರ್ ರೇಟ್‌ನಿಂದಾಗಿ ಐಸಿಸಿ ಶ್ರೀಲಂಕಾಕ್ಕೆ ದಂಡ ವಿಧಿಸಿದ್ದು, ಪಂದ್ಯದ ಶುಲ್ಕದ 10 ಪ್ರತಿಶತವನ್ನು ದಂಡವಾಗಿ ಪಾವತಿಸಬೇಕಾಗಿದೆ. ಐಸಿಸಿ ನಿಯಮಗಳ ಪ್ರಕಾರ 50 ಓವರ್‌ಗಳ ಪಂದ್ಯವನ್ನು ನಿರ್ದಿಷ್ಟ ಸಮಯದೊಳಗೆ ಪೂರ್ಣಗೊಳಿಸಬೇಕು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ಬೌಲಿಂಗ್ ಮಾಡುವಾಗ ಶ್ರೀಲಂಕಾ ನಿಗದಿತ ಸಮಯದಲ್ಲಿ 50 ಓವರ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ನಾಯಕ ದಸುನ್ ಶನಕ ನೇತೃತ್ವದ ಶ್ರೀಲಂಕಾ ತಂಡ ನಿಗದಿತ ಸಮಯಕ್ಕೆ 2 ಓವರ್ ಕಡಿಮೆ ಬೌಲ್ ಮಾಡಿತ್ತು. ಹೀಗಾಗಿ ಶ್ರೀಲಂಕಾ ವಿರುದ್ಧ ಐಸಿಸಿ ಈ ಕ್ರಮ ಕೈಗೊಂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 429 ರನ್‌ಗಳ ಬೃಹತ್ ಗುರಿ ನೀಡಿತು.ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕೂಡ ಗೆಲುವಿಗಾಗಿ ಹೋರಾಟ ನೀಡಿತು. ಅಂತಿಮವಾಗಿ 44.5 ಓವರ್‌ಗಳಲ್ಲಿ 326 ರನ್‌ಗಳಿಗೆ ಆಲೌಟ್ ಆಗಿ ಸೋಲು ಅನುಭವಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2.3 / 5. Vote count: 4

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು