News Karnataka Kannada
Wednesday, May 08 2024
ಕ್ರೀಡೆ

ನೂತನ ರ‍್ಯಾಂಕಿಂಗ್​​​​​ನಲ್ಲಿ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ ಈ ಆಟಗಾರ

ICC Rankings
Photo Credit : By Author

ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಶ್ರೇಯಾಂಕದಲ್ಲಿ ವಿಶ್ವಕಪ್ ಕ್ವಾಲಿಫೈಯರ್ ಆಡುತ್ತಿರುವ ತಂಡಗಳ ಆಟಗಾರರು  ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಯುಎಇ ವಿರುದ್ಧದ ಕ್ವಾಲಿಫೈಯರ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಐರ್ಲೆಂಡ್‌ನ ಹ್ಯಾರಿ ಟೆಕ್ಟರ್ ನೂತನ ಐಸಿಸಿ ಶ್ರೇಯಾಂಕದಲ್ಲಿ 7ನೇ ಸ್ಥಾನಕ್ಕೇರಿದ್ದಾರೆ.

ಯುಎಇ ವಿರುದ್ಧ ಕೇವಲ 33 ಎಸೆತಗಳಲ್ಲಿ 57 ರನ್ ಚಚ್ಚಿದ್ದ 23 ವರ್ಷದ ಹ್ಯಾರಿ ಟೆಕ್ಟರ್, ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ಪಡೆದಿರುವುದಲ್ಲದೆ ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಇವರಲ್ಲದೆ, ವಿಂಡೀಸ್ ಬ್ಯಾಟರ್ ನಿಕೋಲಸ್ ಪೂರನ್ ಮತ್ತು ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಝಾ ಅವರಂತಹ ಸ್ಟಾರ್ ಆಟಗಾರರು ಸಹ ಐಸಿಸಿ ರ್ಯಾಂಕಿಂಗ್​ನಲ್ಲಿ ಲಾಭ ಪಡೆದುಕೊಂಡಿದ್ದಾರೆ.

ನೂತನ ಏಕದಿನ ಆಟಗಾರರ ಶ್ರೇಯಾಂಕಗಳ ಪ್ರಕಾರ, ಐರ್ಲೆಂಡ್‌ನ ಹ್ಯಾರಿ ಟೆಕ್ಟರ್ ಟೆಕ್ಟರ್ ಈ ಹಿಂದೆ ಇದ್ದ 9ನೇ ಸ್ಥಾನದಿಂದ ಎರಡು ಸ್ಥಾನ ಮುಂಬಡ್ತಿ ಪಡೆದಿದ್ದಾರೆ. ಅಂದರೆ 7ನೇ ಸ್ಥಾನಕ್ಕೇರಿರುವ ಟೆಕ್ಟರ್, ಕೊಹ್ಲಿ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಟೆಕ್ಟರ್ ಈಗ 723 ರೇಟಿಂಗ್ ಪಾಯಿಂಟ್‌ಗಳೊಂದಿಗೆ 7 ನೇ ಸ್ಥಾನದಲ್ಲಿದ್ದು, ಕಿಂಗ್ ಕೊಹ್ಲಿ 8 ನೇ ಸ್ಥಾನಕ್ಕಿಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು