ಹೈದರಾಬಾದ್: ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ, ನಂಬರ್ 1 ಸ್ಥಾನಕ್ಕೇರಿದ್ದಾರೆ.
ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಬುಮ್ರಾ ಪ್ರದರ್ಶನ ಅದ್ಭುತವಾಗಿದೆ. ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 2 ವಿಕೆಟ್ ಕಬಳಿಸಿದ್ದ ಬುಮ್ರಾ, ಎರಡನೇ ಇನ್ನಿಂಗ್ಸ್ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು.
ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲೂ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದ ಬುಮ್ರಾ ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿದ್ದರೆ, ಎರಡನೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಪಡೆದು ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡಿದ್ದರು.
ಈ ಅಮೋಘ ಪ್ರದರ್ಶನ ಲಾಭ ಪಡೆದಿರುವ ಬುಮ್ರಾ, ನೂತನ ಟೆಸ್ಟ್ ರ್ಯಾಂಕಿಂಗ್ನಲ್ಲಿ ಮೂರು ಸ್ಥಾನ ಮೇಲೇರಿ 881 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.