News Karnataka Kannada
Sunday, May 05 2024
ಕ್ರೀಡೆ

ವಿಶ್ವಕಪ್ ಸಮರಕ್ಕೆ ಕ್ಷಣಗಣನೆ: ಏಕದಿನ ವಿಶ್ವಕಪ್​ನ​ ಸಂಪೂರ್ಣ ವೇಳಾಪಟ್ಟಿ ಪ್ರಕಟ

Team Indai (1)
Photo Credit : Twitter

ಬಹುನಿರೀಕ್ಷಿತ ಕ್ರಿಕೆಟ್ ಮಹಾಸಮರ ಏಕದಿನ ವಿಶ್ವಕಪ್ ನಾಳೆಯಿಂದ (ಅ.5) ಶುರುವಾಗಲಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಇದುವರೆಗೆ ಭಾರತ ತಂಡ 12 ಏಕದಿನ ವಿಶ್ವಕಪ್‌ ಪಂದ್ಯಗಳನ್ನಾಡಿದೆ. ಆದರೆ ಈ ಜರ್ನಿಯಲ್ಲಿ ಏರಿಳಿತಗಳನ್ನು ಕಂಡಿದ್ದಂತು ಸುಳ್ಳಲ್ಲ. ಇನ್ನು ಈ ಬಾರಿಯ ಏಕದಿನ ವಿಶ್ವಕಪ್‌ 13ನೇ ಆವೃತ್ತಿ ಭಾರತದಲ್ಲಿ ನಡೆಯಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೇ,  ಏಕದಿನ ವಿಶ್ವಕಪ್​’ನಲ್ಲಿ ಒಂದೇ ಒಂದು ಬಾರಿಯೂ ಪಾಕ್ ತಂಡ ಭಾರತವನ್ನು ಸೋಲಿಸಿಲ್ಲ. ಇದುವರೆಗೆ 7 ಬಾರಿ ಭಾರತ ಮತ್ತು ಪಾಕ್ ಮುಖಾಮುಖಿಯಾಗಿದ್ದು, ಇದರಲ್ಲಿ ಪ್ರತಿ ಬಾರಿಯೂ ಭಾರತ ಗೆದ್ದಿದೆ.

ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಚೆನ್ನೈನಲ್ಲಿ ನಡೆಯಲಿದೆ.

ಹಾಗೆಯೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಅ.14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಸೆಮಿಫೈನಲ್​​ನಿಂದ ಎರಡು ತಂಡಗಳು ಫೈನಲ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಫೈನಲ್​ ಪಂದ್ಯವು ಸೆಪ್ಟೆಂಬರ್ 19 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು