News Karnataka Kannada
Thursday, May 09 2024
ಕ್ರೀಡೆ

ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಟ್ರೋಫಿ ಅನಾವರಣ

ICC World Cup 2023 Trophy
Photo Credit : IANS Twitter

ಈ ವರ್ಷ ಭಾರತದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯ ಫೀವರ್ ಶುರುವಾಗಿದೆ. ಅತ್ತ ಜಿಂಬಾಬ್ವೆಯಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದರೆ ಇತ್ತ ಭಾರತದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹಾಗೂ ಬಿಸಿಸಿಐ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟ್ರೋಫಿಯನ್ನು ವಿಶೇಷವಾಗಿ ಅನಾವರಣ ಮಾಡಿದೆ.

ವಿಶ್ವಕಪ್ ಟ್ರೋಫಿಯನ್ನು ಅತ್ಯಂತ ವಿಶೇಷವಾಗಿ ಆಗಸದಿಂದ ಅನಾವರಣಗೊಳಿಸಲಾಗಿದೆ. ಭುವಿಯಿಂದ ಸುಮಾರು 1,20,000 ಅಡಿ ಎತ್ತರದಲ್ಲಿ ಬಲೂನ್‌ಗೆ ಕಟ್ಟಿದ ಪ್ರತಿಷ್ಠಿತ ಬೆಳ್ಳಿಯ ಟ್ರೋಫಿಯನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚಿತ್ತಾಕರ್ಷಕ ರೀತಿಯಲ್ಲಿ ಇಳಿಸಲಾಯಿತು.

ಅತ್ಯಾಧುನಿಕ 4ಕೆ ಕ್ಯಾಮೆರಾಗಳ ಮೂಲಕ ಈ ಅದ್ಭುತ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಇದು ಗಗನಕ್ಕೇರಿದ ಮೊದಲ ಕ್ರೀಡಾ ಟ್ರೋಫಿ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ಮೂಲಕ ಕ್ರೀಡಾಲೋಕದಲ್ಲಿ ವಿಶೇಷ ಸಾಧನೆಯೊಂದನ್ನು ಐಸಿಸಿ ಹಾಗೂ ಬಿಸಿಸಿಐ ಮಾಡಿದೆ.

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್‌ 5 ರಿಂದ ನವೆಂಬರ್‌ 19ರವರೆಗೆ ನಡೆಯಲಿದೆ. ಮಾಹಿತಿಯ ಪ್ರಕಾರ ಜೂನ್ 27ರ ಇಂದು ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು