News Karnataka Kannada
Monday, May 20 2024
ಕ್ರೀಡೆ

ಐಸಿಸಿ ವಿಶ್ವಕಪ್: ಭಾರತ ಎದುರು ಟಾಸ್ ಗೆದ್ದ ಆಫ್ಘಾನ್‌

Photo Credit : News Kannada

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಆಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡವು ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆದರೆ ಆಫ್ಘಾನಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ ಕೇವಲ 3 ಬಾರಿ ಮಾತ್ರ ಮುಖಾಮುಖಿಯಾಗಿವೆ. ಈ ವೇಳೆ 2 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, ಒಂದು ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸುವಲ್ಲಿ ಅಫ್ಘಾನಿಸ್ತಾನ್ ತಂಡ ಯಶಸ್ವಿಯಾಗಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಅಫ್ಘಾನಿಸ್ತಾನ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫರೂಲ್ಹಕ್ ಫಾರೂಖಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು