ಬೆಂಗಳೂರು: ಏಕದಿನ ವಿಶ್ವಕಪ್ನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳು ಇದುವರೆಗೆ 2 ಬಾರಿ ಮುಖಾಮುಖಿಯಾಗಿದೆ. ಈ ವೇಳೆ 2 ಪಂದ್ಯವನ್ನೂ ಭಾರತ ತಂಡವೇ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಮ್ ಇಂಡಿಯಾದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.