ನ್ಯೂಲ್ಯಾಂಡ್ಸ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಾಗೂ ಎರಡನೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 7 ವಿಕೆಟ್ಗಳಿಂದ ಮಣಿಸಿದೆ.
ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಆಫ್ರಿಕಾ ನೀಡಿದ 79 ರನ್ಗಳ ಗೆಲುವಿನ ಗುರಿಯನ್ನು ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 11.5 ಓವರ್ಗಳಲ್ಲಿ ಸಾಧಿಸಿತು.
ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 28 ರನ್ ಸಿಡಿಸಿದರೆ ನಾಯಕ ರೋಹಿತ್ ಶರ್ಮಾ ಅಜೇಯ 17 ರನ್ಗಳ ಕೊಡುಗೆ ನೀಡಿದರು. ಉಳಿದಂತೆ ಶುಭ್ಮನ್ ಗಿಲ್ 10 ರನ್ ಹಾಗೂ ವಿರಾಟ್ ಕೊಹ್ಲಿ 12 ರನ್ ಬಾರಿಸಿದರೆ, ಬೌಂಡರಿ ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ದಕ್ಷಿಣ ಆಫ್ರಿಕಾ 176 ರನ್ ಗಳಿಗೆ ಆಲೌಟ್ ಆಗಿದ್ದು, ರೋಹಿತ್ ಶರ್ಮಾ ಮತ್ತು ತಂಡವು ಆತಿಥೇಯರನ್ನು 7 ವಿಕೆಟ್ ಗಳಿಂದ ಸೋಲಿಸಿ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ರೋಹಿತ್ ಪಡೆ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ.
𝘼 𝙘𝙧𝙖𝙘𝙠𝙚𝙧 𝙤𝙛 𝙖 𝙬𝙞𝙣! ⚡️ ⚡️#TeamIndia beat South Africa by 7⃣ wickets in the second #SAvIND Test to register their first Test win at Newlands, Cape Town. 👏 👏
Scorecard ▶️ https://t.co/PVJRWPfGBE pic.twitter.com/vSMQadKxu8
— BCCI (@BCCI) January 4, 2024