News Karnataka Kannada
Friday, May 10 2024
ಕ್ರೀಡೆ

ಭಾರತ vs ವೆಸ್ಟ್ ಇಂಡೀಸ್​ 2ನೇ ಟಿ20: ಟೀಂ ಇಂಡಿಯಾಗೆ ಸೋಲು

ind vs wi
Photo Credit : News Kannada

ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಟಿ20 ಸರಣಿಯಲ್ಲೂ ಅದೇ ಪದ್ಧತಿಯನ್ನು ಮುಂದುವರೆಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಮೊದಲ ಟಿ20 ಪಂದ್ಯವನ್ನು 5 ರನ್​ಗಳಿಂದ ಸೋತಿದ್ದ ಹಾರ್ದಿಕ್ ಪಡೆ ಇದೀಗ ಸತತ 2ನೇ ಟಿ20 ಪಂದ್ಯದಲ್ಲೂ ಸೋಲು ಕಂಡಿದೆ.

ಗಯಾನಾದ ಪೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಣ ಎರಡನೇ ಟಿ20 ಪಂದ್ಯವನ್ನೂ ಸಹ ಆತಿಥೇಯ ವಿಂಡೀಸ್ 2 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ತಿಲಕ್ ವರ್ಮಾ ಅವರ ಅರ್ಧಶತಕದ ನೆರವಿನಿಂದಾಗಿ ವಿಂಡೀಸ್ ಪಡೆಗೆ 153 ರನ್​ಗಳ ಸಾಧಾರಣ ಸವಾಲನ್ನು ನೀಡಿತ್ತು. ಈ ಸವಾಲನ್ನು ಬೆನ್ನಟ್ಟಿದ ವಿಂಡೀಸ್ ಪಡೆ 8 ವಿಕೆಟ್​ ಕಳೆದುಕೊಂಡು 18.5 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು.

ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ  20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿತ್ತು. ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ್ದ ವೆಸ್ಟ್‌ ಇಂಡೀಸ್‌ ನಿಗದಿತ 18.5 ಓವರ್‌ಗಳಲ್ಲೇ 8 ವಿಕೆಟ್‌ ನಷ್ಟಕ್ಕೆ 155 ರನ್‌ ಬಾರಿಸಿ ರೋಚಕ ಗೆಲುವು ಸಾಧಿಸಿದೆ.

ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ವಿಂಡೀಸ್ 2-0 ಅಂತರದಿಂದ ಏಕಪಕ್ಷೀಯ ಮುನ್ನಡೆ ಸಾಧಿಸಿದೆ. ವೆಸ್ಟ್ ಇಂಡೀಸ್ ಪರ 67 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ನಿಕೋಲಸ್ ಪೂರನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು