News Karnataka Kannada
Thursday, May 02 2024
ಕ್ರೀಡೆ

ಇಂದಿನಿಂದ ಭಾರತ- ವೆಸ್ಟ್ ಇಂಡೀಸ್ ದ್ವಿತೀಯ ಟೆಸ್ಟ್

match
Photo Credit : By Author

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 141 ರನ್​ಗಳ ಇನ್ನಿಂಗ್ಸ್ ಜಯ ಸಾಧಿಸಿತ್ತು. ಹೀಗಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಈಗಾಗಲೇ ಉಭಯ ತಂಡಗಳು ಭರ್ಜರಿ ಅಭ್ಯಾಸದಲ್ಲಿ ನಿರತವಾಗಿದೆ.

ಎರಡನೇ ಟೆಸ್ಟ್ ಕೂಡ ಭಾರತದ ಪಾಲಾದರೆ ಕೆರಿಬಿಯನ್ ನಾಡಲ್ಲಿ ತನ್ನ ಅಜೇಯ ಗೆಲುವಿನ ಓಟವನ್ನು ಮುಂದುವರೆಸಲಿದೆ. ಅತ್ತ ವೆಸ್ಟ್ ಇಂಡೀಸ್​ಗೆ ಈ ಟೆಸ್ಟ್ ಬಹುಮುಖ್ಯವಾಗಿದ್ದು, ತವರಿನಲ್ಲಿ ಮಾನ ಉಳಿಸಿಕೊಳ್ಳಲು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಸ್ಥಳೀಯ ಕಾಲಮಾನದ ಪ್ರಕಾರ 9:30 AM ಹಾಗೂ ಭಾರತೀಯ ಕಾಲಮಾನದ ಪ್ರಕಾರ 7.30 PM ರಿಂದ ಪ್ರಾರಂಭವಾಗಲಿದೆ. ದೂರದರ್ಶನ (ಡಿಡಿ) ಸ್ಪೋರ್ಟ್ಸ್ ಚಾನೆಲ್‌ನಲ್ಲಿ ಲೈವ್ ವೀಕ್ಷಿಸಬಹುದು. ಅಂತೆಯೆ ಜಿಯೋ ಸಿನಿಮಾ ಮತ್ತು ಫ್ಯಾನ್​ಕೋಡ್ ಆ್ಯಪ್​ಗಳಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು