News Karnataka Kannada
Thursday, May 09 2024
ಕ್ರೀಡೆ

ವಿಂಡೀಸ್ ವಿರುದ್ಧ ಏಕದಿನ ಸರಣಿ ಗೆದ್ದ ಭಾರತ

IND win
Photo Credit : Twitter

ವೆಸ್ಟ್ ಇಂಡೀಸ್:  ಕೆರಿಬಿಯನ್ನರ ನಾಡಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದು ಬೀಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್, ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ತಂಡದ ಪರ ಆರಂಭಿಕ ಕಣಕ್ಕಿಳಿದ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ವಿಂಡೀಸ್ ಬೌಲಿಂಗ್​ ವಿಭಾಗದ ಮೇಲೆ ಆರಂಭದಲ್ಲೇ ಸವಾರಿ ನಡೆಸಿದರು. ಆರಂಭಿಕರಿಬ್ಬರೂ ಅರ್ಧಶತಕದ ಇನ್ನಿಂಗ್ಸ್ ಆಡುವುದರೊಂದಿಗೆ 19.4 ಓವರ್‌ಗಳಲ್ಲಿಯೇ ತಂಡದ ಮೊತ್ತವನ್ನು 143 ರನ್‌ಗಳ ಗಡಿ ದಾಟಿಸಿದರು. ಈ ಪಂದ್ಯದಲ್ಲಿ 77 ರನ್​ಗಳ ಇನ್ನಿಂಗ್ಸ್ ಆಡಿದ ಕಿಶನ್, ಏಕದಿನ ಸರಣಿಯ ಮೂರೂ ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ ದಾಖಲೆ ಬರೆದರು.

ಕೊನೆಯ ಎರಡು ಓವರ್‌ಗಳಲ್ಲಿ ಹಾರ್ದಿಕ್ (ಔಟಾಗದೆ 70, 5 ಸಿಕ್ಸರ್, 4 ಬೌಂಡರಿ) 3 ಸಿಕ್ಸರ್ ಬಾರಿಸಿದರು. ಇದರ ಆಧಾರದ ಮೇಲೆ ತಂಡ 351 ರನ್ ಕಲೆ ಹಾಕಿತು.

ಬಳಿಕ ಬ್ಯಾಟಿಂಗ್ ಆರಂಭಿಸಿದ ವಿಂಡೀಸ್ ಪಡೆ 35.3 ಓವರ್‌ಗಳಲ್ಲಿ ಕೇವಲ 151 ರನ್‌ಗಳಿಗೆ ಆಲೌಟ್ ಆಯಿತು. 2006 ರಿಂದ ವೆಸ್ಟ್ ಇಂಡೀಸ್ ವಿರುದ್ಧ ತನ್ನ ಗೆಲುವಿನ ನಾಗಲೋಟವನ್ನು ಮುಂದುವರೆಸಿರುವ ಭಾರತ ಸತತ 13 ನೇ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು