ನವದೆಹಲಿ: ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಸೋಲು ಕಂಡಿತ್ತು. ಆದರೆ ರಾಯ್‌ಪುರದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯದಲ್ಲಿ 20 ರನ್ಗಳಿಂದ ಆಸೀಸ್ ತಂಡವನ್ನು ಮಣಿಸಿದ ಸೂರ್ಯಕುಮಾರ್ ಯಾದವ್ ಪಡೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಬೀಗಿದೆ.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಯ ಬ್ಯಾಟಿಂಗ್ ಮಾಡಿದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 175 ರನ್ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 7 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಸದ್ಯ ಭಾರತ ತಂಡ ಸರಣಿಯಲ್ಲಿ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.
ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಟೀಂ ಇಂಡಿಯಾದ ಆರಂಭಿಕ ಜೋಡಿ ಭರವಸೆಯ ಆರಂಭವನ್ನೇ ನೀಡಿತು. ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಇಬ್ಬರೂ ಆರಂಭಿಕ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಆದರೆ ನಂತರ ಈ ಜೋಡಿ ಬೇರ್ಪಟ್ಟಿತು. 37 ರನ್ ಗಳಿಸಿ ಜೈಸ್ವಾಲ್ ಔಟಾದರು. ಆ ಬಳಿಕ ಬಂದ ಉಪನಾಯಕ ಶ್ರೇಯಸ್ ಅಯ್ಯರ್ ಕೇವಲ 8 ರನ್ ಕಲೆಹಾಕಿ ತಕ್ಷಣವೇ ಔಟಾದರು. ಶ್ರೇಯಸ್ ನಂತರ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಕೇವಲ 1 ರನ್ಗಳಿಗೆ ಸುಸ್ತಾದರು.
ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…