News Karnataka Kannada
Saturday, May 04 2024
ಕ್ರೀಡೆ

ನೆದರ್ಲೆಂಡ್ಸ್‌ ತಂಡವನ್ನು 160 ರನ್‌ ಗಳಿಂದ ಮಣಿಸಿದ ಭಾರತ

India avenge World Cup defeat
Photo Credit : News Kannada

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಅಂತಿಮ ಲೀಗ್‌ ಪಂದ್ಯದಲ್ಲಿ ನೆದರ್ಲೆಂಡ್ಸ್‌ ತಂಡವನ್ನು 160 ರನ್‌ ಗಳಿಂದ ಮಣಿಸಿದ ಭಾರತ ತಂಡ ಎಲ್ಲ ಲೀಗ್‌ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿಫೈನಲ್ಸ್‌ ಗೆ ಲಗ್ಗೆ ಇಟ್ಟಿದೆ. ಇದೇ 15ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ.

ಭಾರತ ನೀಡಿದ್ದ 411 ರನ್‌ಗಳ ಬೃಹತ್‌ ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್ ತಂಡ 47.5 ಓವರ್‌ಗಳಲ್ಲಿ 250 ರನ್‌ಗಳಿಗೆ ಆಲೌಟ್ ಆಯಿತು. ನೆದರ್ಲೆಂಡ್ಸ್ ಪರ ತೇಹಾ ನಿಡಮನೂರು(54) ಅರ್ಧಶತಕ ಸಿಡಿಸಿದರೆ, ಸಿಬ್ರಾಂಡ್ ಎಂಗೆಲೆಕ್ಟ್ 4 45 ರನ್‌ ಸಿಡಿಸಿದರು.’

ಭಾರತದ ಪರ ಒಂಬತ್ತು ಮಂದಿ ಬೌಲಿಂಗ್ ಮಾಡಿದ್ದು ವಿಶೇಷವಾಗಿತ್ತು. ರೆಗ್ಯುಲರ್ ಬೌಲರ್‌ಗಳ ಜೊತೆ ನಾಯಕ ರೋಹಿತ್‌ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್ ಸಹ ಬೌಲಿಂಗ್ ಮಾಡಿದರು. ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ, ಕಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು