Categories: ಕ್ರೀಡೆ

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಮುಂಬೈ: ಏಕದಿನ ವಿಶ್ವಕಪ್​ನ 33ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 19.4 ಓವರ್​ಗಳಲ್ಲಿ ಕೇವಲ 55 ರನ್​ಗಳಿಗೆ ಟೀಮ್ ಇಂಡಿಯಾ ಆಲೌಟ್ ಮಾಡಿದೆ. ಈ ಮೂಲಕ 302 ರನ್​ಗಳ ಬೃಹತ್ ಅಂತರದ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ 2023ರ ಸೆಮಿಫೈನಲ್​ಗೆ ಪ್ರವೇಶಿಸಿದೆ. ಇನ್ನು ಈ ಪಂದ್ಯದಲ್ಲಿ 5 ಓವರ್​ಗಳಲ್ಲಿ 18 ರನ್ ನೀಡಿ 5 ವಿಕೆಟ್ ಕಬಳಿಸಿದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago