News Karnataka Kannada
Monday, May 13 2024
ಕ್ರೀಡೆ

ಇಂದು ಏಕದಿನ ವಿಶ್ವಕಪ್ ಫೈನಲ್: ಭಾರತ-ಆಸ್ಟ್ರೇಲಿಯಾ ಕದನ, ಗೆದ್ದವರಿಗೆ ಎಷ್ಟು ಹಣ ?

Final
Photo Credit :

ಅಹ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್​ಗೆ ಕ್ಷಣಗಣನೆ ಶುರುವಾಗಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ರೋಹಿತ್ ಶರ್ಮಾ ನಾಯಕತ್ವ ಭಾರತ ಹಾಗೂ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ನಡುವೆ ಪ್ರಶಸ್ತಿಗಾಗಿ ಅಂತಿಮ ಕಾದಾಟ ನಡೆಯಲಿದೆ.

ಪಂದ್ಯ ಆರಂಭಕ್ಕೂ ಮುನ್ನ ಸಮಾರೋಪ ಸಮಾರಂಭ ಆಯೋಜನೆ ಮಾಡಲಿದೆ. ಇದರಲ್ಲಿ ಬಾಲಿವುಡ್ ತಾರೆಯರು ನೃತ್ಯ ಮಾಡಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಅಲ್ಲದೆ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ತಂಡವು ತಮ್ಮ ವೈಮಾನಿಕ ಕೌಶಲ್ಯಗಳನ್ನು ಪ್ರಸ್ತುತಪಡಿಸಲಿದೆ.

ಇನ್ನು ಈಗಾಗಲೇ ಪಂದ್ಯದ ಬಗ್ಗೆ ಭಾರೀ ನೀರಕ್ಷೆ ಹುಟ್ಟಿಕೊಂಡಿದೆ. ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ರಿಚರ್ಡ್​ ಮಾರ್ಲ್ಸ್​ ಜೊತೆಗೆ ಭಾರತದ ಗೃಹ ಸಚಿವರಾದ ಅಮಿತ್​ ಶಾ ಕೂಡ ಈ ಪಂದ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ತಂಡಗಳನ್ನು ಹುರಿದುಂಬಿಸಲಿದ್ದಾರೆ.

1983ರಲ್ಲಿ ಕಪಿಲ್​ ದೇವ್​ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದಾಗ ಕ್ರಿಕೆಟ್​ ಅಭಿಮಾನಿಯಾದ ಲತಾ ಮಂಗೇಶ್ಕರ್​ ಅವರು ತಂಡದ ಆಟಗಾರರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ನೀಡುವಂತೆ ಕೇಳಿಕೊಂಡರು. 2011ರಲ್ಲಿ ಧೋನಿ ನಾಯಕತ್ವದಲ್ಲೂ ಟೀಂ ಇಂಡಿಯಾ ಗೆದ್ದಾಗ ಹಣ ಸುರಿಮಳೆಯನ್ನೇ ಸುರಿಸಲಾಗಿದೆ.

ವಿಶ್ವಕಪ್​ನಲ್ಲಿ ಚಾಂಪಿಯನ್​ ತಂಡ ಐಸಿಸಿಯಿಂದ 33.17 ಕೋಟಿ ಬಹುಮಾನ ಪಡೆಯಲಿದೆ. ಆದರೆ ರನ್ನರ್​ ಅಪ್​ ಆದರೆ 16 ಕೋಟಿಯಷ್ಟು ಹಣ ಸಿಗಲಿದೆ. ಇನ್ನು ಸೆಮಿಫೈನಲ್​ನಲ್ಲಿ ಸೋತ ತಂಡಗಳಿಗೆ 6.63 ಕೋಟಿ ಹಣ ಸಿಗಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್​ ಪಂದ್ಯದ ಭಾರೀ ನಿರೀಕ್ಷೆಗಳಿದೆ. ಇಂದಿನ ಪಂದ್ಯದಲ್ಲಿ ರಿಚರ್ಡ್ ಇಲ್ಲಿಂಗ್‌ವರ್ತ್ (ಇಂಗ್ಲೆಂಡ್) ಮತ್ತು ರಿಚರ್ಡ್ ಕ್ಯಾಟಲ್‌ಬರೋ (ಇಂಗ್ಲೆಂಡ್) ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮೂರನೇ ಅಂಪೈರಿಂಗ್ ಜವಾಬ್ದಾರಿಯನ್ನು ವೆಸ್ಟ್ ಇಂಡೀಸ್ ನ ಜೋಯಲ್ ವಿಲ್ಸನ್​ಗೆ ವಹಿಸಲಾಗಿದೆ. ಕ್ರಿಸ್ ಗಫ್ನಿ (ನ್ಯೂಜಿಲೆಂಡ್) ನಾಲ್ಕನೇ ಅಂಪೈರ್ ಆಗಿರುತ್ತಾರೆ. ಮ್ಯಾಚ್ ರೆಫರಿ ಜಿಂಬಾಬ್ವೆಯ ಆಂಡಿ ಪೈಕ್ರಾಫ್ಟ್ ಆಗಿರುತ್ತಾರೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು