Bengaluru 23°C

52 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ ಭಾರತ

Hoky

ಪ್ಯಾರಿಸ್‌: ಕಟ್ಟಾ ಎದುರಾಳಿ ಆಸ್ಟ್ರೇಲಿಯಾ ವಿರುದ್ಧ ಒಲಿಂಪಿಕ್ಸ್‌ ಹಾಕಿಯಲ್ಲಿ ಭಾರತ ತಂಡ ಮಹಾ ಗೆಲುವು ದಾಖಲಿಸಿದೆ. ಇಂದು ನಡೆದ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಹಾಕಿ ತಂಡ 3-2 ಗೋಲುಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿತು.


ಇದು ಒಲಿಂಪಿಕ್ಸ್‌ನಲ್ಲಿ ಭಾರತ ತಂಡಕ್ಕೆ ಆಸ್ಟ್ರೇಲಿಯಾ ವಿರುದ್ಧ 52 ವರ್ಷಗಳ ನಂತರ ಬಂದಿರುವ ಗೆಲುವು ಎನಿಸಿದೆ. ಇದಕ್ಕೂ ಮುನ್ನ 1972ರ ಒಲಿಂಪಿಕ್‌ ಗೇಮ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು 3-1 ರಿಂದ ಸೋಲಿಸಿತ್ತು. ಅದಾದ 50 ವರ್ಷಗಳ ಬಳಿಕ ಈ ಗೆಲುವು ದಾಖಲಿಸಿದೆ.


ಈ ನಡುವೆ ಆಡಿದ ಆರು ಪಂದ್ಯಗಳಲ್ಲಿ ಭಾರತ ಸೋಲು ಕಂಡಿದ್ದರೆ, ಒಂದು ಪಂದ್ಯವನ್ನು ಡ್ರಾ ಮಾಡಕೊಂಡಿತ್ತು. ಭಾರತ ತಂಡ ಈಗಾಗಲೇ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಟ್ಟಿದೆ.


 

Nk Channel Final 21 09 2023