ಕ್ರೀಡೆ

ಭಾರತ 100 ಪದಕಗಳ ಬೇಟೆ: ಸ್ಪರ್ಧಿಗಳೊಂದಿಗೆ ಸಂವಾದಕ್ಕೆ ಎಕ್ಸೈಟ್ ಆಗಿದ್ದೇನೆ ಎಂದ ಮೋದಿ

ದೆಹಲಿ: ಏಷ್ಯನ್ ಗೇಮ್ಸ್​ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇದೇ ಮೊದಲ ಬಾರಿಗೆ 100 ಪದಕಗಳನ್ನು ಬೇಟೆಯಾಡುವ ಮೂಲಕ ಸಾರ್ವಕಾಲಿಕ ಇತಿಹಾಸ ನಿರ್ಮಿಸಿದೆ.

ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿ ಖುಷಿಪಟ್ಟಿದ್ದಾರೆ. ಏಷ್ಯನ್ ಗೇಮ್ಸ್​ನಲ್ಲಿ ಭಾರತವು 25 ಚಿನ್ನ, 35 ಬೆಳ್ಳಿ ಹಾಗೂ 40 ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ. ಈ ಮೂಲಕ ನೂರನೇ ಪದಕವನ್ನು ತನ್ನ ತೆಕ್ಕೆಗೆ ಭಾರತ ತೆಗೆದುಕೊಂಡಿದೆ.

ಇನ್ನು ಏಷ್ಯನ್‌ ಗೇಮ್ಸ್‌ ನಲ್ಲಿ ಪದಕಗಳ ಶತಕ ಬಾರಿಸಿದ ಭಾರತೀಯ ಸ್ಪರ್ಧಿಗಳ ಸಾಧನೆಯನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿ ಕ್ರೀಡಾಪಟುಗಳ ಜೊತೆ ಸಂವಾದಕ್ಕೆ ಎಕ್ಸೈಟ್‌ ಆಗಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, “ಏಷ್ಯನ್ ಗೇಮ್ಸ್​ನಲ್ಲಿ ನಮ್ಮ ಭಾರತ ಮಹತ್ವದ ಸಾಧನೆ ಮಾಡಿದೆ.

100 ಮೆಡಲ್​ಗಳನ್ನು ಗೆದ್ದು ಹೊಸ ಮೈಲುಗಲ್ಲು ಸಾಧಿಸಿದಕ್ಕೆ ದೇಶದ ಜನ ರೋಮಾಂಚನಗೊಂಡಿದ್ದಾರೆ. ನಾನು ಕೂಡ ತುಂಬಾ ಎಕ್ಸೈಟ್ ಆಗಿದ್ದೇನೆ. ಏಷ್ಯನ್ ಗೇಮ್ಸ್​ನಲ್ಲಿ ಹೊಸ ಭಾಷ್ಯ ಬರೆದ ನಮ್ಮ ಕ್ರೀಡಾಪಟುಗಳಿಗೆ ತುಂಬು ಹೃದಯದಿಂದ ಅಭಿನಂದಿಸುತ್ತೇನೆ. ಪ್ರತಿ ವಿಸ್ಮಯಕಾರಿಯಾದ ಪ್ರದರ್ಶನ, ಹೋರಾಟವು ಇತಿಹಾಸವನ್ನು ನಿರ್ಮಿಸಿದೆ. ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆಯಾಗಿದೆ. ಇದೇ ಅಕ್ಟೋಬರ್ 10 ರಂದು ಎಲ್ಲಾ ಏಷ್ಯನ್ ಗೇಮ್ಸ್​ನಲ್ಲಿ ಭಾಗಿಯಾಗಿದ್ದ ಎಲ್ಲಾ ಕ್ರೀಡಾಪುಟುಗಳ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

Ashika S

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

17 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

33 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

44 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago