ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ 10ನೇ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಶ್ರೀಲಂಕಾದ ರಂಗಿರಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್ಗೇರಬಹುದು.
ಇದೀಗ ಎರಡು ಗೆಲುವುಗಳೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವು ನೇಪಾಳ ವಿರುದ್ಧ ಗೆದ್ದರೆ ಅಧಿಕೃತವಾಗಿ ಸೆಮಿಫೈನಲ್ಗೇರಲಿದೆ. . ಅತ್ತ ನೇಪಾಳ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ನೇಪಾಳ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

