News Karnataka Kannada
Monday, April 29 2024
ಕ್ರೀಡೆ

ಇಂಡಿಯಾ ಪಾಕ್‌ ಹೈ ವೋಲ್ಟೇಜ್‌ ಪಂದ್ಯ: ಭಾರತಕ್ಕೆ ಏಳು ವಿಕೆಟ್‌ಗಳ ಭರ್ಜರಿ ಜಯ

Cricket 9
Photo Credit : IANS

ಅಹಮದಾಬಾದ್‌: ಭಾರತದ ಬೌಲರ್‌ ಗಳು ಹಾಗೂ ಬ್ಯಾಟ್ಸಮನ್‌ ಗಳ ಶ್ರಮದಿಂದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಪಾಕ್‌ ವಿರುದ್ಧ ಭಾರತ 7 ವಿಕೆಟ್‌ಗಳ ಜಯ ಸಾಧಿಸಿದೆ.  ಈ ಮೂಲಕ ವಿಶ್ವಕಪ್ ಟೂರ್ನಿಗಳಲ್ಲಿ ಭಾರತವು ಪಾಕ್ ವಿರುದ್ಧ ಸತತ 8ನೇ ಜಯ ದಾಖಲಿಸಿತು. ಈ ಟೂರ್ನಿಯಲ್ಲಿ ಭಾರತ ಹ್ಯಾಟ್ರಿಕ್ ಗೆಲುವಿನೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು.

ಅಹಮದಾಬಾದ್‌ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 42.5 ಓವರ್‌ಗಳಲ್ಲಿ 191 ರನ್‌ ಗಳಿಸಿ ಸರ್ವಪತನ ಕಂಡಿದೆ. ಮೊಹಮ್ಮದ್‌ ಸಿರಾಜ್, ಜಸ್‌ಪ್ರೀತ್‌ ಬೂಮ್ರಾ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಹಾಗೂ ರವಿಂದ್ರ ಜಡೇಜ ತಲಾ ಎರಡು ವಿಕೆಟ್‌ಗಳನ್ನು ಹಂಚಿಕೊಂಡರು. ನಂತರ ಬ್ಯಾಟ್ ಮಾಡಿದ ಭಾರತ ಮೂರು ವಿಕೆಟ್ ಕಳೆದುಕೊಂಡು 30.3 ಓವರ್‌ಗಳಲ್ಲಿ 192 ರನ್‌ಗಳಿಸಿ ಗೆಲುವಿನ ನಗೆ ಬೀರಿತು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು